ಎಸ್.ಎಂ.ಕೃಷ್ಣ ಗೆ ಅಧಿಕೃತ ಆಹ್ವಾನ ನೀಡಿದ ಸಿಎಂ ಬೊಮ್ಮಾಯಿ

ಶನಿವಾರ, 2 ಅಕ್ಟೋಬರ್ 2021 (15:06 IST)
ಬೆಂಗಳೂರು : ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಗೌರವ ನೀಡಿರುವುದು ನನ್ನ ಬಾಳಿನ ಸುದೈವ ಎಂದು ಮಾಜಿ ಮುಖ್ಯಮಂತ್ರಿ, ಹಿರಿಯ ಮುತ್ಸದ್ಧಿ ಎಸ್.ಎಂ.ಕೃಷ್ಣ ಪ್ರತಿಪಾದಿಸಿದ್ದಾರೆ.

ಸದಾಶಿವನಗರದಲ್ಲಿನ ತಮ್ಮ ನಿವಾಸದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಸಹಕಾರ ಸಚಿವರು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಕಂದಾಯ ಸಚಿವ ಅಶೋಕ್ ಅವರಿಂದ 2021ರ ಸಾಲಿನ ಮೈಸೂರು ದಸರಾ ಉದ್ಘಾಟನೆಯ ಆಮಂತ್ರಣ ಸ್ವೀಕರಿಸಿದ ಬಳಿಕ ಸುದ್ದಿಗಾರರ ಜೊತೆ ಅವರು ಮಾತನಾಡಿದರು.
ತಾಯಿ ಚಾಮುಂಡೇಶ್ವರಿ ಆಶೀರ್ವಾದದಿಂದ ನಾಡಿನ ಸರ್ವತೋಮುಖ ಅಭಿವೃದ್ಧಿಯಾಗಲಿ. ನನ್ನ ವ್ಯಕ್ತಿತ್ವ ರೂಪಿಸಸಲು ರಾಮಕೃಷ್ಣ ಆಶ್ರಮ ಬಹಳ ಪ್ರಭಾವ ಬೀರಿದೆ. ನನ್ನ ಶಾಲೆ ಮತ್ತು ಕಾಲೇಜು ದಿನಗಳನ್ನು ಮೈಸೂರಿನಲ್ಲಿ ಕಳೆದಿದ್ದೆ. ಇದೀಗ ದಸರಾ ಉದ್ಘಾಟನೆ ಮಾಡುವ ಸುಯೋಗ ಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದರು.ಇಂತಹ ಅವಕಾಶ ನೀಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ,ಹಾಗೂ ಸಚಿವ ಸಂಪುಟದ ಎಲ್ಲರಿಗೂ ಅಭಿನಂದನೆಗಳುಎಂದು ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ