ಡಿಕೆಶಿಗೆ ಸಿಎಂ ಬೊಮ್ಮಾಯಿ ಗುದ್ದು
ಕಾಂಗ್ರೆಸ್ ಗುಂಡಿಯಲ್ಲೇ ಮೊದಲು ನೀರೇ ಇಲ್ಲ. ಮೊದಲು ಅದನ್ನು ನೋಡಿಕೊಳ್ಳಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.ಬಿಜೆಪಿ ಡ್ಯಾಂ ಒಡೆದು ನೀರು ಖಾಲಿಯಾಗಿ ಕಾಂಗ್ರೆಸ್‍ನತ್ತ ಹರಿದುಬರುತ್ತದೆ ಎಂಬ ಶಿವಕುಮಾರ್ ಹೇಳಿಕೆಗೆ ಕೆಂಡಮಂಡಲರಾದ ಸಿಎಂ, ಕಾಂಗ್ರೆಸ್ ಗುಂಡಿಯಲ್ಲಿ ನೀರೇ ಇಲ್ಲದಿರುವಾಗ ಹರಿದು ಹೋಗುವುದು ಎಲ್ಲಿಗೆ ಎಂದು ಪ್ರಶ್ನೆ ಮಾಡಿದರು.....ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲು ಕಾಂಗ್ರೆಸ್‍ನಲ್ಲಿ ಏನು ನಡೆಯುತ್ತಿದೆ ಎಂಬುದನ್ನು ನೋಡಿಕೊಳ್ಳಲಿ. ಬಿಜೆಪಿ ಬಗ್ಗೆ ಅವರು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ನಮ್ಮ ಹೈಕಮಾಂಡ್ ಬಲಿಷ್ಟವಾಗಿದ್ದು ಏನೇ ಇದ್ದರೂ ಸರಿಪಡಿಸುವ ಸಾಮಥ್ರ್ಯ ಹೊಂದಿದ್ದಾರೆ ಎಂದರು. ಯಡಿಯೂರಪ್ಪ ಅವರನ್ನು ಬಿಜೆಪಿ ಸೇರಿದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮುಗಿಸಲು ಹೊರಟ್ಟಿದ್ದಾರೆ ಎಂಬ ಡಿಕೆಶಿ ಆರೋಪಕ್ಕೆ ಸಿಡಿಮಿಡಿಗೊಂಡ ಬೊಮ್ಮಾಯಿ, ಸಿದ್ದರಾಮಯ್ಯ ಅವರನ್ನು ಹೇಗೆ ಮುಗಿಸಿದ್ದಾರೆ ಎಂಬುದು ಗೊತ್ತಿಲ್ಲವೇ..ಕಳೆದ ಬಾರಿ ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯನವರನ್ನು ಮುಗಿಸಿದ್ದೇ ಕಾಂಗ್ರೆಸ್ ಪಕ್ಷ. ಈ ಬಾರಿ ವರುಣಾದಲ್ಲಿ ಮುಗಿಸಲು ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕರು ಏನೇನು ತಂತ್ರ, ಕುತಂತ್ರ ಮಾಡಿದ್ದಾರೆ ಎಂಬುದು ಜಗತ್ತಿಗೆ ಗೊತ್ತು ಎಂದು ಡಿಕೆಶಿ ವಿರುದ್ಧ ಕಿಡಿಕಾರಿದ್ರು.