ಕನ್ನಡದ ಪ್ರಗತಿಯಾದರೆ ಕರ್ನಾಟಕದ ಪ್ರಗತಿಯಾಗುತ್ತದೆ. ಆಡಳಿತದಲ್ಲಿ ಕನ್ನಡ ಅನುಷ್ಠಾನ ಆಗಬೇಕು. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಪೊಲೀಸ್ ಕವಾಯತಿನ ನಿರ್ದೇಶನ ಸೇರಿದಂತೆ ಎಲ್ಲ ಆದೇಶಗಳನ್ನು ಕನ್ನಡದಲ್ಲಿಯೇ ನೀಡುವ ಪದ್ಧತಿಯನ್ನು ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.ಅವರು ಇಂದು ಬೆಂಗಳೂರಿನಲ್ಲಿ 66ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿ ಈ ವಿಷಯ ತಿಳಿಸಿದರು.