ರಾಷ್ಟ್ರೀಯ ಏಕತಾ ದಿವಸ ಆಚರಣೆ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಜ್ಞಾ ವಿಧಿ ಬೋಧಿಸಿದ್ರು. ಪ್ರತಿಜ್ಞಾ ವಿಧಿ ಕಾರ್ಯಕ್ರಮದಲ್ಲಿ ಸಚಿವ ಸುನಿಲ್ ಕುಮಾರ್, ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ, ಸಂಸದ ಉಮೇಶ್ ಜಾಧವ್ ಭಾಗಿಯಾಗಿದ್ರು. ಭ್ರಷ್ಟಾಚಾರ ನಿರ್ಮೂಲನೆ ಮಾಡುವ ಬಗ್ಗೆ ಪ್ರತಿಜ್ಞೆ ಮಾಡಲಾಯಿತು. ನಂತರ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ ನಾಳೆ 67ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿದ್ದೇವೆ. ನಾಳೆ ಮಧ್ಯಾಹ್ನ 4 ಗಂಟೆಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ವಿಧಾನಸೌಧದ ಮೆಟ್ಟಿಲುಗಳು ಮೇಲೆ ದಿವಂಗತ ನಟ ಪುನೀತ್ ಅವರಿಗೆ ನೀಡಲಾಗುವುದು. ಎಲ್ಲಾ ಅಭಿಮಾನಿಗಳು ಭಾಗವಹಿಸಬೇಕೆಂದು ಕೇಳಿಕೊಳ್ಳುತ್ತೇನೆ ಎಂದು ಸಿಎಂ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಿವಿಧ ಕ್ಷೇತ್ರಗಳ ಸಾಧಕರಿಗೆ ನಾಳೆ ರಾಜ್ಯೋತ್ಸವ ಪ್ರಶಸ್ತಿ ನೀಡ್ತೀದ್ದೇವೆ. ನವೆಂಬರ್ 2, 3, 4 ರಂದು ಇನ್ವೆಸ್ಟ್ ಕರ್ನಾಟಕ ಕಾರ್ಯಕ್ರಮ ಮಾಡ್ತಿದ್ದೇವೆ. ವಿಶ್ವದ ನಾನಾ ಭಾಗದ ಹೂಡಿಕೆದಾರರು,ಬಂಡವಾಳಶಾಹಿಗಳು ಭಾಗಿಯಾಗ್ತಾರೆ. 5 ಲಕ್ಷ ಕೋಟಿ ಹೂಡಿಕೆಯಾಗಲಿದೆ. ಅನೇಕ ಕ್ಷೇತ್ರಗಳ ಪ್ರಗತಿ, ಬೆಳವಣಿಗೆ ಸವಾಲುಗಳ ಬಗ್ಗೆ ಕೂಡ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದ್ರು. ನವೆಂಬರ್ 11 ರಂದು ವಂದೇ ಭಾರತ್ ಟ್ರೈನ್, ವಿಮಾನ ನಿಲ್ದಾಣದ ಟರ್ಮಿನಲ್ 2 ಮತ್ತು ಕೆಂಪೇಗೌಡರ ಪ್ರಗತಿಯ ಪ್ರತಿಮೆ ಉದ್ಘಾಟನೆಯಾಗಲಿದೆ. ಆ ಕಾರ್ಯಕ್ರಮದಲ್ಲಿ ಲಕ್ಷಾಂತರ ಜನ ಸೇರಲಿದ್ದಾರೆ ಜನರನ್ನುದ್ದೇಶಿಸಿ ಮೋದಿಯವರು ಕಾರ್ಯಕ್ರಮ ನಡೆಸಲಿದ್ದಾರೆ ಎಂದು ತಿಳಿಸಿದ್ರು.