ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ಸರ್ಕಾರ ಎರಡು ವರ್ಷ ಉತ್ತಮ ಆಡಳಿತ ನೀಡಿದ್ದು. ಸಿಎಂ ಖುರ್ಚಿಗೆ ಕಚ್ಚಾಡುತ್ತಿದ್ದಾರೆ ಎನ್ನುವ ವಿಷಯ ಅವರಿಗೆ ಸಂಬಂಧಿಸಿದ್ದಲ್ಲ. ದೇಶದ ಸಂಪತ್ತನ್ನು ಬಿಜೆಪಿ ಹನ್ನೊಂದು ವರ್ಷದಿಂದ ಕೊಳ್ಳೆ ಹೊಡೆಯುತ್ತಿದೆ. ತಾನು ನಡೆಸಿದ ಕರ್ಮಕಾಂಡ ಹಾಗೂ ದುರಾಡಳಿತ ಜನತೆಗೆ ತಿಳಿಯಬಾರದು ಎಂದು, ಸ್ಥಳೀಯವಾಗಿರುವ ಸಮಸ್ಯೆಗಳನ್ನು ದೊಡ್ಡದಾಗಿ ಬಿಂಬಿಸುವ ಯತ್ನ ಮಾಡುತ್ತಿದೆ ಎಂದು ಸಚಿವ ಸಂತೋಷ ಲಾಡ್ ಆರೋಪಿಸಿದರು.
ಸೋಮವಾರ ಮಾಧ್ಯದವರೊಂದಿಗೆ ಮಾತನಾಡಿದ ಅವರು, ಸಿಎಂ ಕುರ್ಚಿ ಬಗ್ಗೆ ಮಾತನಾಡುವ ವಿಷಯ ಅವರಿಗೆ ಸಂಬಂಧಿಸಿದ್ದಲ್ಲ. ನಾವು ಏನು ಬೇಕಾದರೂ ಮಾಡುತ್ತೇವೆ. ಆಡಳಿತದಲ್ಲಿ ಎಲ್ಲಿಯಾದರೂ ತಪ್ಪಾಗಿದ್ದರೆ ಪ್ರಶ್ನಿಸಲಿ ಎಂದು ಹೇಳಿದರು.
ಪಾಕಿಸ್ತಾನದ ವಿರುದ್ಧ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆದಾಗ, ಅದನ್ನು ತಾನೇ ನಿಲ್ಲಿಸಿದ್ದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹತ್ತಾರು ಬಾರಿ ಹೇಳಿಕೆ ನೀಡಿ ಭಾರತಕ್ಕೆ ಅವಮಾನ ಮಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರು 90 ದೇಶಗಳನ್ನು ಸುತ್ತಾಡಿ ಸ್ನೇಹ ಸಂಪಾದಿಸಿದರೂ, 83 ದೇಶಗಳು ಪಾಕಿಸ್ತಾನಕ್ಕೆ ಬೆಂಬಲ ವ್ಯಕ್ತಪಡಿಸಿವೆ.