ಅಕ್ಟೋಬರ್‌ನಲ್ಲಿ ಸಿಎಂ ಬದಲಾವಣೆ ಪಕ್ಕಾ, ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ: ಆರ್ ಅಶೋಕ್
ಎಸ್‌ಎಂ ಕೃಷ್ಣ ಅವರು ನಿಧನದ ನಂತರ ಅವರ ಹೆಸರು ಹೇಳುತ್ತಾರೆ. ಎಸ್.ಎಂ. ಕೃಷ್ಣ ಸತ್ತ ಮೇಲೆ ಖರ್ಗೆ ಟೀಕೆ ಮಾಡುತ್ತಿದ್ದಾರೆ. ಈ ಮೂಲಕ ಕೃಷ್ಣಗೆ ಅಪಮಾನ ಮಾಡುತ್ತಿದ್ದಾರೆ ಎಂದರು.
ಸಿದ್ದರಾಮಯ್ಯ ಇಲ್ಲದಿದ್ದರೆ ಮಲ್ಲಿಕಾರ್ಜುನ್ ಖರ್ಗೆ ಸಿಎಂ ಆಗುತ್ತಿದ್ದರೆ. ಅಕ್ಟೋಬರ್ ತಿಂಗಳಿನಲ್ಲಿ ಸಿಎಂ ಬದಲಾವಣೆ ಆಗುವುದು ನಿಜ. ಸಿಎಂ ಸ್ಥಾನಕ್ಕಾಗಿ ವರ ಕೊಡುವ ದೇವರ ಬಳಿ ಡಿಕೆಶಿ ಹೋಗುತ್ತಿದ್ದಾರೆ. ಡಿಕೆಗೆ ಕಂಟಕ ಇರೋದು ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಹೋದವರಿಂದ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.