ಪೆನ್‌ಡ್ರೈವ್ ಪ್ರಕರಣದ ತನಿಖೆಯನ್ನು ಸಿಎಂ, ಡಿಸಿಎಂ ತಮಗೆ ಬೇಕಂತೆ ನಡೆಸುತ್ತಿದ್ದಾರೆ: ಜೆಡಿ ದೇವೇಗೌಡ

Sampriya

ಮಂಗಳವಾರ, 7 ಮೇ 2024 (16:30 IST)
Photo Courtesy X
ಮೈಸೂರು: ಪ್ರಜ್ವಲ್ ಪೆನ್‌ಡ್ರೈವ್‌ ಪ್ರಕರಣವನ್ನು ಹಾಲಿ ನ್ಯಾಯಾಧೀಶರೊಬ್ಬರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಒಳಪಡಿಸುವಂತೆ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜೆಟಿ ದೇವೇಗೌಡ ಅವರು ಒತ್ತಾಯಿಸಿದರು.

ಅದಲ್ಲದೆ ಪೆನ್‌ಡ್ರೈವ್ ಹಂಚಿದವರ ಮೇಲೆ ಸೂಕ್ತ ಕ್ರಮ ಕೈಗೊಂಡು ಬಂಧಿಸಬೇಕೆಂದರು. ಸರ್ಕಾರವು ಈ ಪ್ರಕರಣವನ್ನು ಎಸ್‌ಐಟಿಗೆ ವಹಿಸಿದಾಗ ಜೆಡಿಎಸ್ ಸ್ವಾಗತಿಸಿದ್ದು, ಇದೀಗ ತನಿಖೆ  ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ತಮಗೆ ಬೇಕಾದ ರೀತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಇದೀಗ ಪ್ರಕರಣದಲ್ಲಿ ಯಾರನ್ನು ಬಂಧಿಸಬೇಕು, ಯಾರನ್ನು ಬಿಡಬೇಕು ಎಂದು ಡಿ.ಕೆ. ಶಿವಕುಮಾರ್ ಅಣತಿಯಂತೆ ಎಸ್‌ಐಟಿ ಅಧಿಕಾರಿಗಳು ನಡೆಯುತ್ತಿದ್ದಾರೆ. ಸಿಬಿಐ ತನಿಖೆಗೆ ಕಾಂಗ್ರೆಸ್ ಒಪ್ಪುವುದಿಲ್ಲ. ಹೀಗಾಗಿ ನ್ಯಾಯಾಧೀಶರಿಂದಲೇ ಪ್ರಕರಣದ ತನಿಖೆ ನಡೆಸಬೇಕು ಎಂದು ಅಗ್ರಹಿಸಿದರು.

ಇನ್ನೂ ಪೆನ್‌ಡ್ರೈಬ್ ಪ್ರಕರಣವನ್ನು ಸಿಎಂ ಹಾಗೂ ಡಿಸಿಎಂ ಅವರು ಲೋಕಸಭೆ ಚುನಾವಣೆಗೆ ಮಾಡಿರುವ ಷಡ್ಯಂತ್ರ. ಇಲ್ಲಿ ಸಂತ್ರಸ್ತೆಯರಿಗೆ ನ್ಯಾಯ ಸಿಗುವುದು ಅವರಿಗೆ ಬೇಕಾಗಿಲ್ಲ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ