ಸಿಎಂ ಬಿಡುಗಡೆ ಮಾಡಿರುವ ಆಡಿಯೋ ನಕಲಿ - ಸಿಎಂ ವಿರುದ್ಧ ದೂರು ದಾಖಲಿಸಿದ ಬಿಎಸ್ ವೈ ಮಾಧ್ಯಮ ಸಲಹೆಗಾರ

ಸೋಮವಾರ, 11 ಫೆಬ್ರವರಿ 2019 (11:10 IST)
ಬೆಂಗಳೂರು : ಅಪರೇಷನ್ ಕಮಲದ ಆಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಬಿಎಸ್ ವೈ ಅವರ  ಮಾಧ್ಯಮ ಸಲಹೆಗಾರ ಎಂ.ಬಿ. ಮರಮಕಲ್ ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ.


ಸಿಎಂ ಬಿಡುಗಡೆ ಮಾಡಿರುವ ಆಡಿಯೋ ನಕಲಿಯಾಗಿದ್ದು, ತಮಗೆ ಬೇಕಾದಂತೆ ಸೃಷ್ಟಿಸಿ ಬಿಡುಗಡೆ ಮಾಡಿದ್ದಾರೆ. ಆದ್ದರಿಂದ ಸಿಎಂ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಎಂ.ಬಿ. ಮರಮಕಲ್ ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ.


ಹಾಗೇ ಸಿಎಂ ಕುಮಾರಸ್ವಾಮಿ ಅವರು ಅಧಿಕಾರ ದುರುಪಯೋಗಪಡಿಸಿಕೊಂಡು ಬಿಜೆಪಿ ಘನತೆಗೆ ಧಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ. ಆಡಿಯೋದಲ್ಲಿದ್ದ ಕೆಲ ಎಲೆಕ್ಟ್ರಾನಿಕ್ ದಾಖಲೆಗಳನ್ನು ತಿರುಚಿ ಸುದ್ದಿಗೋಷ್ಠಿಯಲ್ಲಿ ಬಿಡುಗಡೆ ಮಾಡಿದ್ದಾರೆ. ಸುದ್ದಿಗೋಷ್ಠಿ ಸಂದರ್ಭದಲ್ಲಿ ಕುಮಾರಸ್ವಾಮಿ ಅವರು, ದೇವದುರ್ಗ ಅತಿಥಿ ಗೃಹಕ್ಕೆ ಗುರುಮಠಕಲ್ ಶಾಸಕರ ಪುತ್ರ ಶರಣಗೌಡ ಹೋದಾಗ ಅಲ್ಲಿ ಪತ್ರಕರ್ತ ಮರಮಕಲ್ ಸೇರಿ ಹಲವರು ಇದ್ದರು ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ