ಮಧುರೈಗೆ ಹೋದ ಬೆನ್ನಲ್ಲೇ ತಮಿಳುನಾಡಿಗೆ ಸಿಎಂ ಎಚ್ ಡಿಕೆ ಉಡುಗೊರೆ
ಶನಿವಾರ, 16 ಜೂನ್ 2018 (09:50 IST)
ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ತಮ್ಮ ನಿರ್ಧಾರವನ್ನು ಸಿಎಂ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದು, ಜೂನ್ ನಲ್ಲಿ ತಮಿಳುನಾಡಿಗೆ ನೀರು ಹಂಚಿಕೆ ಮಾಡುವುದಾಗಿ ತಿಳಿಸಿದ್ದಾರೆ.
ಕಬಿನಿ ಜಲಾಶಯದಿಂದ ತಮಿಳುನಾಡಿಗೆ 20000 ಕ್ಯೂಸೆಕ್ಸ್ ನೀರು ಬಿಡಲು ಕುಮಾರಸ್ವಾಮಿ ಆದೇಶ ಮಾಡಿದ್ದಾರೆ. ಈ ವರ್ಷ ಉತ್ತಮ ಮಳೆಯಾಗುವ ಲಕ್ಷಣವಿದೆ. ಮಳೆ ಇದೇ ರೀತಿ ಬಂದರೆ ಕಾವೇರಿ ಪ್ರಾಧಿಕಾರದ ಆದೇಶದನ್ವಯ ತಮಿಳುನಾಡಿಗೆ ಬಿಡಬೇಕಾದ 10 ಟಿಎಂಸಿ ನೀರು ಬಿಡಲು ನಮಗೆ ಸಾಧ್ಯವಾಗಬಹುದು ಎಂದು ಸಿಎಂ ಹೇಳಿದ್ದಾರೆ.
ಇನ್ನೊಂದೆಡೆ ಸಿಎಂ ಎಚ್ ಡಿಕೆ ನಿರ್ಧಾರವನ್ನು ತಮಿಳುನಾಡಿನಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪಿಸಿರುವ ನಟ ಕಮಲ್ ಹಾಸನ್ ಸಂತಸ ವ್ಯಕ್ತಪಡಿಸಿದ್ದಾರೆ. ಮಧುರೈ ಮೀನಾಕ್ಷಿ ದೇವಾಲಯಕ್ಕೆ ಭೇಟಿ ಮಾಡಿದ ಬೆನ್ನಲ್ಲೇ ಸಿಎಂ ಈ ನಿರ್ಧಾರ ಪ್ರಕಟಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.