ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಕಾರ್ಯ ಆರಂಭಿಸುವುದಾಗಿ ಸಿಎಂ ಭರವಸೆ
ಬುಧವಾರ, 18 ಡಿಸೆಂಬರ್ 2019 (13:03 IST)
ಬೆಂಗಳೂರು : ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಕಾರ್ಯ ವಿಚಾರಕ್ಕೆ ಸಂಬಂಧಿಸಿದಂತೆ ಕೆಲಸ ಪ್ರಾರಂಭಿಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ ಎಂದು ಭಾರತಿ ವಿಷ್ಣುವರ್ಧನ್ ಹೇಳಿದ್ದಾರೆ.
ಇಂದು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸಕ್ಕೆ ಭೇಟಿ ನೀಡಿದ್ದ ಭಾರತಿ ವಿಷ್ಣುವರ್ಧನ್ ಅವರು ಸಿಎಂ ಜೊತೆ ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಕಾರ್ಯದ ಬಗ್ಗೆ ಮಾತುಕತೆ ನಡೆಸಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಕಾರ್ಯ ವಿಚಾರದ ಬಗ್ಗೆ ಸಿಎಂ ಯಡಿಯೂರಪ್ಪ ನಮ್ಮ ಮನವಿಗೆ ಸ್ಪಂದಿಸಿದ್ದಾರೆ. ಕೆಲಸ ಪ್ರಾರಂಭಿಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ಇನ್ನು 3-4 ದಿನಗಳಲ್ಲಿ ಅಡಿಪಾಯ ಕಾರ್ಯ ಆರಂಭವಾಗಲಿದೆ ಎಂದು ಹೇಳಿದ್ದಾರೆ.