ಇಂದು ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಹಿತಿ ಪಡೆದ ಸಿಎಂ, ಪ್ರವಾಹ ಉಂಟಾಗುವ ಸಾಧ್ಯತೆ ಇರುವ ಗ್ರಾಮಗಳನ್ನು ಸಹ ಮುಂಜಾಗ್ರತಾ ಕ್ರಮವಾಗಿ ಸ್ಥಳಾಂತರಿಸಿ, ಎನ್ ಡಿ ಅರ್ ಎಫ್ ಮತ್ತು ಎಸ್ ಡಿ ಆರ್ ಎಫ್ ತಂಡಗಳನ್ನು ಅಗತ್ಯ ಇರುವ ಜಿಲ್ಲೆಗಳಿಗೆ ತುರ್ತು ಕಳುಹಿಸಿಕೊಡಿ. ಕಾಳಜಿ ಕೇಂದ್ರಗಳನ್ನು ಆದಷ್ಟು ಹೆಚ್ಚು ತೆರದು ಸರ್ವ ಸನ್ನದ್ದವಾಗಿಟ್ಟುಕೊಳ್ಳಲು ಸೂಚಿಸಿದರು.
ಇನ್ನೂ ಅಧಿಕಾರಿಗಳು ರಜೆ ಹಾಕದೆ ಕೆಲಸ ಮಾಡಿ, ಹಣಕಾಸಿನ ನೆರವು ಅಗತ್ಯವಿದ್ದಲ್ಲಿ ಕೂಡಲೇ ಪ್ರಸ್ತಾವನೆ ಸಲ್ಲಿಸಿ. ಸೇನಾ ಹೆಲಿಕಾಪ್ಟರ್ ಗಳನ್ನು ಸನ್ನದ್ದವಾಗಿಟ್ಟುಕೊಳ್ಳಲು ಸೂಚಿಸಿದರು. ಅಧಿಕಾರಿಗಳು 24 ಗಂಟೆ ಎಚ್ಚರಿಕೆಯಿಂದ ಕೆಲಸ ಮಾಡಬೇಕು ಮುಂದಿನ 48 ಗಂಟೆ ಏನು ಅಗುತ್ತೆ ಅನ್ನೋದನ್ನ ಊಹೆ ಮಾಡಿ ಕೆಲಸ ಮಾಡುವಂತೆ ಡಿಸಿಗಳಿಗೆ ಸಿಎಂ ಸೂಚನೆ ನೀಡಿದರು.