ಅನಾರೋಗ್ಯ: ಸಿಂಗಾಪೂರ್‌ಗೆ ಸಿಎಂ ಜಯಲಲಿತಾ ಶಿಫ್ಟ್?

ಶನಿವಾರ, 8 ಅಕ್ಟೋಬರ್ 2016 (14:12 IST)
ಅನಾರೋಗ್ಯದಿಂದ ಬಳಲುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಚಿಕಿತ್ಸೆಯನ್ನು ಮುಂದುವರೆಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಸಿಂಗಾಪೂರ್‌ಗೆ ರವಾನಿಸುವ ಸಾಧ್ಯತೆ ಇದೆ ಎಂದು ಅಪೋಲೋ ಆಸ್ಪತ್ರೆಯ ಮೂಲಗಳು ತಿಳಿಸಿವೆ.  
 
ಅವರು ಅತಿಯಾದ ಮಧುಮೇಹ ಮತ್ತು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸಿಂಗಾಪುರಕ್ಕೆ ರವಾನಿಸುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ. 
 
ಲಂಡನ್ ಬ್ರಿಡ್ಜ್ ಆಸ್ಪತ್ರೆಯ ರಿಚರ್ಡ್ ಜಾನ್ ಸೇರಿದಂತೆ ಇಂಗ್ಲೆಂಡ್ ಮತ್ತು ಅಮೇರಿಕದಿಂದ ಆಗಮಿಸಿರುವ ತಜ್ಞ ವೈದ್ಯರ ತಂಡ ಅವರ ಆರೋಗ್ಯ ತಪಾಸಣೆ ನಡೆಸಿ  ಚಿಕಿತ್ಸೆ ನೀಡುತ್ತಿದೆ.
 
ಜಯಲಲಿತಾ ಕಳೆದ ಸೆಪ್ಟೆಂಬರ್ 22 ರಂದು ನಿರ್ಜಲೀಕರಣ ಮತ್ತು ಜ್ವರದ ಬಾಧೆಗೊಳಗಾಗಿ ಚೆನ್ನೈನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೋಗ್ಯದಲ್ಲಿ ಸುಧಾರಣೆಯಾಗಿದ್ದು, ಕೆಲವು ದಿನಗಳ ಮಟ್ಟಿಗೆ ಅವರನ್ನು ನಿಗಾವಣೆಯಲ್ಲಿ ಇಡಲಾಗುವುದು ಎಂದು ಆಸ್ಪತ್ರೆ ಸೆಪ್ಟೆಂಬರ್ 23 ರಿಂದ ಪತ್ರಿಕಾ ಹೇಳಿಕೆಯನ್ನು ನೀಡುತ್ತಲೇ ಬಂದಿದೆ. ಆದರೆ ಅವರ ಆರೋಗ್ಯದ ಕುರಿತಾದ ಯಾವುದೇ ನಂಬಲರ್ಹ ವರದಿಯನ್ನು ಇನ್ನೂ ಬಿಡುಗಡೆ ಮಾಡಲಾಗಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ