ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸಿಎಂ ಸೂಚನೆ
ರಾಜ್ಯದಲ್ಲಿ ಮಳೆ ಚೆನ್ನಾಗಿ ಆಗಿರುವುದರಿಂದ ಕಾವೇರಿ ಕೊಳ್ಳದಲ್ಲಿ ನೀರು ಭರ್ತಿಯಾಗುತ್ತಿದೆ. ಈ ಹಿನ್ನಲೆಯಲ್ಲಿ ತಮಿಳುನಾಡಿಗೆ ನೀರು ಹರಿಸಲು ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.
ಕಾವೇರಿ ನದಿ ನೀರು ಪ್ರಾಧಿಕಾರ ರಚನೆ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ತಮಿಳುನಾಡಿಗೆ ನೀರು ಬಿಡಲು ಸೂಚಿಸುವ ಮೂಲಕ ಜಾಣತನದ ಹೆಜ್ಜೆಯಿಟ್ಟಿದ್ದಾರೆ ಎನ್ನಲಾಗಿದೆ. ಮಳೆ ಹೆಚ್ಚಾಗಿರುವುದರಿಂದ ನೀರು ಬಿಡದೇ ಇದ್ದರೆ ಯಾವುದೇ ಪ್ರಾಧಿಕಾರದಿಂದ ಆಕ್ಷೇಪ ಬರದಂತೆ ಸಿಎಂ ಈ ತೀರ್ಮಾನ ಕೈಗೊಂಡಿದ್ದಾರೆ ಎನ್ನಲಾಗಿದೆ.