ಶ್ರೀಗಳ ಅನಾರೋಗ್ಯದ ಹಿನ್ನಲೆ; ಶ್ರೀಗಳ ಆರೋಗ್ಯದ ಕುರಿತು ವಿಚಾರಿಸಿದ ಸಿಎಂ ಕುಮಾರಸ್ವಾಮಿ
ಮಂಗಳವಾರ, 1 ಜನವರಿ 2019 (12:04 IST)
ಬೆಂಗಳೂರು : ಸಿದ್ದಗಂಗಾ ಶ್ರೀಗಳ ಅನಾರೋಗ್ಯದ ಹಿನ್ನಲೆಯಲ್ಲಿ ಸಿಎಂ ಕುಮಾರಸ್ವಾಮಿ ಅವರು ದೂರವಾಣಿ ಮೂಲಕ ಕರೆ ಮಾಡಿ ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ.
ಸಿದ್ದಗಂಗಾ ಶ್ರೀಗಳ ಶ್ವಾಸಕೋಶದಲ್ಲಿ ಕಳೆದ ಐದಾರು ದಿನಗಳಿಂದ ಸೊಂಕು ಉಂಟಾದ ಕಾರಣ ಶ್ರೀಗಳಿಗೆ ಮಠದಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಆದಕಾರಣ ವಿದೇಶ ಪ್ರವಾಸದಲ್ಲಿರುವ ಸಿಎಂ ಕುಮಾರಸ್ವಾಮಿ ಅವರು ಮಠಕ್ಕೆ ಕರೆ ಮಾಡಿ ವೈದ್ಯರ ಬಳಿ ಶ್ರೀಗಳ ಆರೊಗ್ಯದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ.
ಅಲ್ಲದೇ ಗೃಹ ಸಚಿವರಾದ ಎಂ.ಬಿ.ಪಾಟೀಲ್ ಅವರು ಶ್ರೀಗಳ ಮಠಕ್ಕೆ ಭೇಟಿ ನೀಡಲಿದ್ದು, ಅವರ ಮೂಲಕ ಸಿಎಂ ಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ತಿಳಿಯಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.