ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡದ ಸಿಎಂ ಕುಮಾರಸ್ವಾಮಿ
ಶನಿವಾರ, 27 ಅಕ್ಟೋಬರ್ 2018 (08:08 IST)
ಬೆಂಗಳೂರು: ಲೋಕಸಭೆ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳು ಸ್ಪರ್ಧಿಸುವ ಕಡೆ ಸಿಎಂ ಕುಮಾರಸ್ವಾಮಿ ಪ್ರಚಾರ ನಡೆಸುತ್ತಿಲ್ಲ. ಇದು ಕಾಂಗ್ರೆಸ್ ನಾಯಕರ ಅಸಮಾಧಾನಕ್ಕೆ ಕಾರಣವಾಗುವ ಸಾಧ್ಯತೆಯಿದೆ.
ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವಿದೆ. ಕೆಲವು ಕಡೆ ಕಾಂಗ್ರೆಸ್ ಮತ್ತು ಜೆಡಿಎಸ್ ಹೊಂದಾಣಿಕೆಯಿಂದ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯನವರೇ ಜೆಡಿಎಸ್ ಅಭ್ಯರ್ಥಿ ಪರ ಮತ ಯಾಚನೆ ನಡೆಸಿದ್ದಾರೆ.
ಹಾಗಿದ್ದರೂ ಸಿಎಂ ಕುಮಾರಸ್ವಾಮಿ ಮಾತ್ರ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿಲ್ಲ. ಶಿವಮೊಗ್ಗದಲ್ಲಿ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ, ಮಂಡ್ಯದಲ್ಲಿ ಶಿವರಾಮೇಗೌಡರ ಪರವಾಗಿ ಮಾತ್ರ ಪ್ರಚಾರ ನಡೆಸುವ ಕಾರ್ಯಕ್ರಮವಿಟ್ಟುಕೊಂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.