ಇಂದು ಅಮೇರಿಕಾದತ್ತ ಪ್ರಯಾಣ ಬೆಳೆಸಲಿರುವ ಸಿಎಂ ಕುಮಾರಸ್ವಾಮಿ. ಕಾರಣವೇನು ಗೊತ್ತಾ?

ಶುಕ್ರವಾರ, 28 ಜೂನ್ 2019 (10:41 IST)
ಬೆಂಗಳೂರು : ಮುಖ್ಯಮಂತ್ರಿ ಎಚ್.​​ಡಿ ಕುಮಾರಸ್ವಾಮಿ ಅವರು ಇಂದು ಸಂಜೆ ಅಮೆರಿಕಕ್ಕೆ ಪ್ರಯಾಣ ಬೆಳೆಸಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಹೌದು. ಅಮೆರಿಕ ಒಕ್ಕಲಿಗರ ಪರಿಷತ್ ಜುಲೈ 4,5,6 ರಂದು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತೆ ಕುಮಾರಸ್ವಾಮಿ ಅವರಿಗೆ ಆಹ್ವಾನ ನೀಡಲಾಗಿದೆ.


ಈ ಹಿನ್ನಲೆಯಲ್ಲಿ ಇಂದು ಸಂಜೆ 7.15ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅವರು ಅಮೆರಿಕಕ್ಕೆ ತೆರಳಲಿದ್ದಾರೆ. ಜುಲೈ 8ರಂದು ಬೆಳಗ್ಗೆ ಬೆಂಗಳೂರಿಗೆ ವಾಪಾಸಾಗಲಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ