ಅತೃಪ್ತ ಶಾಸಕರ ಬಗ್ಗೆ ಗುಪ್ತಚರ ಇಲಾಖೆಯಿಂದ ಮಾಹಿತಿ ಪಡೆದುಕೊಂಡ ಸಿಎಂ ಕುಮಾರಸ್ವಾಮಿ
ಮಂಗಳವಾರ, 9 ಜುಲೈ 2019 (10:03 IST)
ಬೆಂಗಳೂರು: ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಕಸರತ್ತು ನಡೆಸುತ್ತಿರುವ ಸಿಎಂ ಕುಮಾರಸ್ವಾಮಿ ಅತೃಪ್ತ ಶಾಸಕರ ರಾಜೀನಾಮೆ ವಿಚಾರವಾಗಿ ಗುಪ್ತಚರ ಇಲಾಖೆಯಿಂದ ಮಾಹಿತಿ ಪಡೆದುಕೊಂಡಿದ್ದಾರೆ.
ಇಂದು ನಾಲ್ಕೈದು ಶಾಸಕರು ರಾಜೀನಾಮೆ ನೀಡಬಹುದು ಎಂಬ ಸುದ್ದಿಯಿತ್ತು. ಆ ಹಿನ್ನಲೆಯಲ್ಲಿ ಗುಪ್ತಚರ ಇಲಾಖೆಯಿಂದ ಮಾಹಿತಿ ಪಡೆದುಕೊಂಡ ಸಿಎಂ ಕುಮಾರಸ್ವಾಮಿ ಇಂದು ಯಾವ ಶಾಸಕರೂ ರಾಜೀನಾಮೆ ನೀಡಲ್ಲ ಎಂಬ ಖಚಿತಪಡಿಸಿಕೊಂಡಿದ್ದಾರೆ.
ಇದರಿಂದಾಗಿ ಸಿಎಂ ಕೊಂಚ ನಿರಾಳವಾದಂತಾಗಿದೆ. ಅಲ್ಲದೆ, ಇದರಿಂದ ಸರ್ಕಾರ ಉಳಿಸಿಕೊಳ್ಳಲು ಸಿಎಂಗೆ ಮತ್ತಷ್ಟು ಅವಕಾಶ ಸಿಕ್ಕಂತಾಗಿದೆ.