ಬೆಂಗಳೂರು : ಕೊರೊನಾ ಹೆಚ್ಚಿರೋ ಜಿಲ್ಲೆಗಳ ಡಿಸಿಗಳ ಜತೆ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಮೀಟಿಂಗ್ ನಡೆಸಲಿದ್ದಾರೆ.
ಇಂದು ಮಧ್ಯಾಹ್ನ 3 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ 11 ಜಿಲ್ಲೆಗಳಾದ ಬೆಂಗಳೂರು ನಗರ, ಬಳ್ಳಾರಿ, ದಕ್ಷಿಣ ಕನ್ನಡ, ಹಾಸನ, ದಾರವಾಡ, ಬೆಳಗಾವಿ, ಮೈಸೂರು., ಶಿವಮೊಗ್ಗ, ತುಮಕೂರು, ಉಡುಪಿ, ಉತ್ತರ ಕನ್ನಡ ಜಿಲ್ಲಾಧಿಕಾರಿ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಹಲವು ಇಲಾಖೆ ಅಧಿಕಾರಿಗಳು ಭಾಗಿಯಾಗಲಿದ್ದಾರೆ ಎನ್ನಲಾಗಿದೆ.