ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾಗಿರುವ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಹಾಗೂ ಅಧಿಕಾರಿಗಳಾದ ಪ್ರೊನಬ್ ಮೊಹಾಂತಿ ಮತ್ತು ಎಂ.ಎಂ.ಪ್ರಸಾದ್ ವಿರುದ್ಧ ಎಫ್‌ಐಆರ್ ದಾಖಲಿಸಿ ಎಂದು ಮಡಿಕೇರಿ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯ ಆದೇಶ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಾನ ಮರ್ಯಾದೆ ಇದ್ದರೆ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ಪಡೆಯಲಿ ಎಂದು ಹೇಳಿದರು.