ಪರಪ್ಪನ ಅಗ್ರಹಾರ ರಹಸ್ಯ ಭೇದಿಸಲು ಸಿಎಂ ಆದೇಶ

ಶುಕ್ರವಾರ, 14 ಜುಲೈ 2017 (15:07 IST)
ಪರಪ್ಪನ ಅಗ್ರಹಾರ ಜೈಲಿನಲ್ಲಿ ತಮಿಳುನಾಡಿನ ಎಐಎಡಿಎಂಕೆ ನಾಯಕಿ ವಿ.ಕೆ. ಶಶಿಕಲಾಗೆ ವಿಐಪಿ ಆತಿಥ್ಯ ನೀಡಲಾಗುತ್ತಿದೆ ಎನ್ನುವ ವರದಿ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ತನಿಖೆಗೆ ಆದೇಶಿಸಿದ್ದಾರೆ.
 
ಶಶಿಕಲಾಗೆ ಪ್ರತ್ಯೇಕ ಅಡುಗೆಮನೆ ಸೇರಿದಂತೆ ಇತರ ವಿಐಪಿ ಆತಿಥ್ಯ ನೀಡಲಾಗುತ್ತಿದೆ ಎಂದು ಡಿಐಜಿ ರೂಪಾ ಮೌಡ್ಗಿಲ್ ಸರಕಾರಕ್ಕೆ ವರದಿ ಸಲ್ಲಿಸಿದ್ದಾರೆ. ವರದಿ ಸಲ್ಲಿಕೆಯಿಂದ ಡಿಐಜಿ ರೂಪಾ ಮತ್ತು ಡಿಜಿ ಸತ್ಯನಾರಾಯಣರಾವ್ ಮಧ್ಯೆ ಭಾರಿ ತಿಕ್ಕಾಟ ಆರಂಭವಾಗಿದೆ.
 
ಘಟನೆಯ ಬಗ್ಗೆ ತನಿಖೆ ನಡೆಸಲು ನಿವೃತ್ತ ಐಎಎಸ್ ಅಧಿಕಾರಿ ವಿನಯ್ ಕುಮಾರ್ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಒಂದು ವಾರದೊಳಗೆ ಪ್ರಾಥಮಿಕ ವರದಿಯನ್ನು ಸಲ್ಲಿಸುವಂತೆ ಆದೇಶ ನೀಡಿದ್ದಾರೆ.
 
ಒಂದು ತಿಂಗಳೊಳಗಾಗಿ ಪರಪ್ಪನ ಅಗ್ರಹಾರ ಜೈಲಿನ ಅವ್ಯವಹಾರಗಳ ಬಗ್ಗೆ ಸಮಗ್ರ ವರದಿ ಸಲ್ಲಿಸುವಂತೆ ಸಮಿತಿಗೆ ಆದೇಶ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ