ರಾಜಕಾಲುವೆ ಒತ್ತುವರಿ ಮಾಡಿದ್ರೆ ಮೂಲಜಿಲದೆ ಕ್ರಮ , ಸಿಎಂ ಬೊಮ್ಮಾಯಿ

ಮಂಗಳವಾರ, 23 ನವೆಂಬರ್ 2021 (15:28 IST)
ನಗರದಲ್ಲಿ ರಾಜಕಾಲುವೆ ಒತ್ತುವರಿಗಳನ್ನು ಮುಲಾಜಿಲ್ಲದೇ ತೆರವುಗೊಳಿಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಶ್ರೀಮಂತರು ಮಾಡಿರುವ ಒತ್ತುವರಿಗಳನ್ನು ಮೊದಲ ಹಂತದಲ್ಲಿ ತೆರವುಗೊಳಿಸಲಾಗುತ್ತದೆ. ಒತ್ತುವರಿ ಮಾಡಿರುವ ಬಡವರಿಗೆ ನಿವೇಶನಗಳನ್ನು ಒದಗಿಸಿ ನಂತರ ತೆರವು ಮಾಡಲಾಗುತ್ತದೆ ಎಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ರಾಜಕಾಲುವೆ ಮೀಸಲು ಪ್ರದೇಶವನ್ನು ಒತ್ತುವರಿ ಮಾಡಿಕೊಂಡು ನಿರ್ಮಾಣವಾಗಿರುವ ಅಪಾರ್ಟ್‌ಮೆಂಟ್‌ಗಳನ್ನು ತೆರವು ಮಾಡುವಂತೆ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯ ಆದೇಶ ಇದೆ. ಮೀಸಲು ಪ್ರದೇಶದಲ್ಲಿ ಅಪಾರ್ಟ್‌ಮೆಂಟ್‌ಗಳಿರುವುದು ದೊಡ್ಡ ಪ್ರಮಾಣದಲ್ಲಿ ಮಳೆಯಾದಾಗಲೇ ಗೊತ್ತಾಗುತ್ತದೆ. ಮೀಸಲು ಪ್ರದೇಶದಲ್ಲಿರುವ ಅಪಾರ್ಟ್‌ಮೆಂಟ್‌ ಸಮುಚ್ಚಯಗಳಿಗೆ ಈಗಾಗಲೇ ನೋಟಿಸ್‌ ನೀಡಲಾಗಿದೆ. ಅಲ್ಲಿ ಮಳೆ ನೀರು ಹರಿದು ಹೋಗಲು ಅನುಕೂಲ ಕಲ್ಪಿಸಲು ಅವರು ಜಾಗ ಬಿಟ್ಟುಕೊಡಬೇಕು. ಇಲ್ಲದಿದ್ದರೆ ಅವರಿಗೇ ತೊಂದರೆ. ಈ ಕುರಿತು ಒಂದು ಅಭಿಯಾನ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ತಿಳಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ