ಸಿಎಂ, ಪರಮೇಶ್ವರ್ ಬ್ರದರ್ಸ್, ಭಿನ್ನಾಭಿಪ್ರಾಯವಿಲ್ಲ: ಕೆ.ಸಿ.ವೇಣುಗೋಪಾಲ್

ಮಂಗಳವಾರ, 5 ಡಿಸೆಂಬರ್ 2017 (14:12 IST)
ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಮಧ್ಯೆ ಮನಸ್ತಾಪವಿದೆ ಎನ್ನುವ ವರದಿಗಳಲ್ಲಿ ಸತ್ಯಾಂಶವಿಲ್ಲ. ಅವರಿಬ್ಬರು ಸಹೋದರರಂತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ವರದಿಗಳನ್ನು ತಳ್ಳಿಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಾಶೀರ್ವಾದ ಯಾತ್ರೆ ರದ್ದುಗೊಳ್ಳಲು ಸಿಎಂ ಸಿದ್ದರಾಮಯ್ಯ ಮತ್ತು ಜಿ.ಪರಮೇಶ್ವರ್ ಮಧ್ಯದ ಮನಸ್ತಾಪವೇ ಕಾರಣ ಎನ್ನುವ ವರದಿಗಳು ಹರಡಿವೆ. ಆದರೆ. ಅಂತಹ ವರದಿಗಳಲ್ಲಿ ಸತ್ಯಾಂಶವಿಲ್ಲ ಎಂದು ತಿಳಿಸಿದ್ದಾರೆ.
 
ನಾವೆಲ್ಲರು ದೆಹಲಿಯಿಂದ ಒಂದೇ ವಿಮಾನದಲ್ಲಿ ಬಂದಿದ್ದೇವೆ. ನಮ್ಮಲ್ಲಿ ಯಾವುದೇ ಭಿನ್ನಮತವಿಲ್ಲ. ಬಿಜೆಪಿಯವರು ಉದ್ದೇಶಪೂರ್ವಕವಾಗಿ ಇಂತಹ ವರದಿಗಳನ್ನು ಹರಡಿಸುತ್ತಿದ್ದಾರೆ ಎಂದು ಆರೋಪಿಸಿದರು.
 
ಸಿಎಂ ಸಿದ್ದರಾಮಯ್ಯ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ರಾಜ್ಯದ ಜನತೆ ಸಂತುಷ್ಟರಾಗಿದ್ದಾರೆ. ಸೋಲಿನ ಭಯದಿಂದ ಬಿಜಪಿ ನಾಯಕರು ಹತಾಷೆ ಹೇಳಿಕೆ ನೀಡುತ್ತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ತಿರುಗೇಟು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ