ಭುವನೇಶ್ವರಿಗೆ ಸಿಎಂ ಪುಷ್ಪ ನಮನ
ಪ್ರತಿ ವರ್ಷದಂತೆ ನವೆಂಬರ್ 1ರಂದು ಪ್ರಪಂಚದಾದ್ಯಂತ ಇರುವ ಕನ್ನಡಿಗರೆಲ್ಲರು ಸಂಭ್ರಮಿಸುವ ದಿನ. 1956 ನವೆಂಬರ್ 1ರಂದು ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಮೈಸೂರು ರಾಜ್ಯವಾಗಿ ಘೋಷಣೆ ಮಾಡಲಾಯಿತು. ಮೈಸೂರು ರಾಜ್ಯವಾಗಿ ಘೋಷಣೆಯಾದ ಈ ಪರ್ವದಿಂದ ಸಂಕೇತವಾಗಿ ಅಂದಿನಿಂದ ಕನ್ನಡಿಗರೆಲ್ಲರೂ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಮಗ್ರ ಶಿಕ್ಷಣ ಇಲಾಖೆ ವತಿಯಿಂದ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ 67ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಸಿಎಂ ಬಸವರಾಜ್ ಬೊಮ್ಮಾಯಿ ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿ ಧ್ವಜಾರೋಹಣ ನೆರವೇರಿಸಿದರು. ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ, ಗೋವಿಂದರಾಜು, ಶಾಸಕ ರಿಜ್ವಾನ್ ಅರ್ಷದ್, ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.