ಹೈಕಮಾಂಡ್ ಭೇಟಿಗೆ ದೆಹಲಿಗೆ ಪ್ರಯಾಣಿಸಿದ ಸಿಎಂ ಯಡಿಯೂರಪ್ಪ

ಗುರುವಾರ, 15 ಜುಲೈ 2021 (20:49 IST)
ಹೈಕಮಾಂಡ್ ಸೂಚನೆ ಮೇರೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ಸಂಜೆ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಲಿದ್ದಾರೆ.
ದೆಹಲಿಗೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ಇತರರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದು, ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎಂದರು.
ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಚರ್ಚೆ ಇಲ್ಲ. ಒಂದು ವೇಳೆ ಹೈಕಮಾಂಡ್ ಪ್ರಸ್ತಾಪಿಸಿದರೆ ಮಾತನಾಡುವೆ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ