ರಾಜಣ್ಣ-ಡಿಕೆಶಿ ಮಾತಿನ ಯುದ್ಧಗೆ ಸಿಎಂ ಎಂಟ್ರಿ: ಹೈಕಮಾಂಡ್‌ನತ್ತ ಬೊಟ್ಟು ಮಾಡಿದ ಸಿದ್ದರಾಮಯ್ಯ

Sampriya

ಮಂಗಳವಾರ, 18 ಫೆಬ್ರವರಿ 2025 (17:29 IST)
ಬೆಂಗಳೂರು: ಸಹಕಾರ ಸಚಿವ ಕೆ.ಎನ್. ರಾಜಣ್ಣ ಹಾಗೂ  ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ವಾಕ್ಸಮರ ಜೋರಾಗಿದೆ. ಇದೀಗ ಇಬ್ಬರು ನಾಯಕರ ವಾಕ್ಸಮರದ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯ ಕಾಂಗ್ರೆಸ್‌ನಲ್ಲಿ ಒಳಜಗಳ ಜೋರಾಗಿದೆ. ಒಂದೆಡೆ ಸಿಎಂ ಬದಲಾವಣೆ ಕೂಗು ಎದ್ದಿದ್ದರೆ, ಮತ್ತೊಂದೆಡೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೂ ಆಗ್ರಹ ಕೇಳಿ ಬಂದಿದೆ. ಇದರ ನಡುವೆ ರಾಜಣ್ಣ ಮತ್ತು ಶಿವಕುಮಾರ್ ನಡುವೆ ಮಾತಿನ ಯುದ್ಧ ತಾರಕ್ಕೇರಿತ್ತು.

ಅಧಿಕಾರ ಹಂಚಿಕೆ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ. ಎಲ್ಲರಿಗೂ ಹೈಕಮಾಂಡ್ ತೀರ್ಮಾನ ಅನ್ವಯ ಆಗುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಚಿವ ರಾಜಣ್ಣ ಅವರ ಅಭಿಪ್ರಾಯ ಹೇಳಿದ್ದಾರೆ. ಡಿ.ಕೆ ಶಿವಕುಮಾರ್ ಅವರ ಅಭಿಪ್ರಾಯ ಹೇಳಿದ್ದಾರೆ. ಅದರ ಬಗ್ಗೆ ನಾನು ಮಾತಾಡೋಕೆ ಹೋಗೊಲ್ಲ. ಹೈಕಮಾಂಡ್ ಅಂತಿಮವಾಗಿ ತೀರ್ಮಾನ ಮಾಡಲಿದೆ. ಹೈಕಮಾಂಡ್ ತೀರ್ಮಾನಕ್ಕೆ‌ ನಾನು ಬದ್ಧ. ನನ್ನನ್ನು ಸೇರಿದಂತೆ ಎಲ್ಲರೂ ಹೈಕಮಾಂಡ್ ತೀರ್ಮಾನ ಅನ್ವಯ ಆಗುತ್ತದೆ ಎಂದು ಹೇಳಿದರು.

ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಸೂತ್ರದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಎಷ್ಟು ಸಲ ಹೇಳಬೇಕು ಅದನ್ನುಎಂದು ಕೋಪಗೊಂಡರು. ಅದು ಹೈಕಮಾಂಡ್ ಮಾಡುವ ವಿಚಾರ. ಅವರು ಮಾಡುತ್ತಾರೆ, ಅದನ್ನು ಪಾಲಿಸುತ್ತೇವೆ. ಹೈಕಮಾಂಡ್ ತೀರ್ಮಾನ ಎಲ್ಲರಿಗೂ ಅನ್ವಯ ಎಂದರು.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ