ಮಾಜಿ ಸಿಎಂಗಳ ಅಕ್ರಮ ಗಣಿಗಾರಿಕೆ ಕೇಸ್: ಜು.27ಕ್ಕೆ ವಿಚಾರಣೆ ನಿಗದಿ ಪಡಿಸಿದ ಸುಪ್ರೀಂಕೋರ್ಟ್

ಶುಕ್ರವಾರ, 7 ಜುಲೈ 2017 (15:21 IST)
ಮೂವರು ಮಾಜಿ ಮುಖ್ಯಮಂತ್ರಿಗಳ ಅಕ್ರಮ ಗಣಿಗಾರಿಕೆ ಪ್ರಕರಣವನ್ನು ಜು.27 ರಂದು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂಕೋರ್ಟ್ ಹೇಳಿದೆ.
 
ಮಾಜಿ ಮುಖ್ಯಮಂತ್ರಿಗಳಾದ ಎಸ್‌.ಎಂ.ಕೃಷ್ಣ, ಎಚ್.ಡಿ.ಕುಮಾರಸ್ವಾಮಿ, ಎನ್‌.ಧರ್ಮಸಿಂಗ್ ಹಾಗೂ ಇತರ 14 ಅಧಿಕಾರಿಗಳ  ವಿರುದ್ಧದ ಅಕ್ರಮ ಗಣಿಗಾರಿಕೆ ಅಂತಿಮ ಪ್ರಕರಣದ ವಿಚಾರಣೆಗೆ ಸುಪ್ರೀಂಕೋರ್ಟ್ ಜುಲೈ 27ಕ್ಕೆ ನಿಗದಿಪಡಿಸಿದೆ.
 
ಎಚ್.ಡಿ.ಕುಮಾರಸ್ವಾಮಿ ಪರ ವಕೀಲ ಶೇಖರ್ ಖಾಪ್ಟೆ ಸುಪ್ರೀಂಕೋರ್ಟ್‌ನಲ್ಲಿ ವಾದ ಮಂಡಿಸಿ, ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ಬಾಕಿಯಿರುವುದರಿಂದ, ಕೆಳ ನ್ಯಾಯಾಲಯಗಳು ನಮ್ಮ ಅರ್ಜಿಯ ವಿಚಾರಣೆ ನಡೆಸುತ್ತಿಲ್ಲ. ಆದ್ದರಿಂದ ತ್ವರಿತಗತಿಯಿಂದ ವಿಚಾರಣೆ ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ