ರಾಜ್ಯದ ಹಿತಕ್ಕಾಗಿ ಕೈ ಜೋಡಿಸಿ ಎಂದ ಸಿಎಂ

geetha

ಮಂಗಳವಾರ, 6 ಫೆಬ್ರವರಿ 2024 (14:44 IST)
ಬೆಂಗಳೂರು : ಕೇಂದ್ರ ಸರ್ಕಾರವು ರಾಜ್ಯದ ಬಗ್ಗೆ ಮಲತಾಯಿ ಧೋರಣೆ ತೋರಿಸುತ್ತಿದೆ. ತೆರಿಗೆ ಹಂಚಿಕೆಯಲ್ಲಿ ಆಗುತ್ತಿರುವ ಭಾರೀ ಅನ್ಯಾಯ, ಬರ ಪರಿಹಾರ ನೀಡದಿರುವುದು, ವಿವಿಧ ಯೋಜನೆಗಳಿಗೆ ಅನುಮತಿ ನೀಡದಿರುವುದು, ನೆರವು ನೀಡುವಲ್ಲಿ ತೋರುತ್ತಿರುವ ನಿರ್ಲಕ್ಷ್ಯ ಮತ್ತು ವಿಳಂಬವನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಈ ಧರಣಿ ಸತ್ಯಾಗ್ರಹಕ್ಕೆ ನಾಡಿನ ಸಮಸ್ತ ಜನತೆಯ ಪರವಾಗಿ ನೀವೂ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. 

 ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಬುಧವಾರ ದೆಹಲಿಯಲ್ಲಿ ಕೇಂದ್ರ  ಸರ್ಕಾರದ ವಿರುದ್ದ ಪ್ರತಿಭಟನೆ ಹಮ್ಮಿಕೊಂಡಿದೆ. ಈ ಪ್ರತಿಭಟನೆಗೆ ಪಕ್ಷ ಬೇಧ ತೊರೆದು ರಾಜ್ಯದ ಹಿತಾಸಕ್ತಿಗಾಗಿ ಎಲ್ಲರೂ ಕೈಜೋಡಿಸಿ ಎಂದು ಮನವಿ ಮಾಡಿಕೊಂಡಿರುವ ಸಿಎ ಸಿದ್ದರಾಮಯ್ಯ ಜೆಡಿಎಸ್‌ ಹಾಗೂ ಬಿಜೆಪಿ ನಾಯಕರಿಗೂ ಸಹ ಪತ್ರ ಬರೆದಿದ್ದಾರೆ. 
ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ, ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಎಲ್ಲಾ ಹಿರಿಯ ನಾಯಕರು, ಶಾಸಕರು ಹಾಗೂ ಸಂಸದರಿಗೂ ಸಿಎಂ ಪತ್ರ ಬರೆದಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ