ಸೋಶಿಯಲ್ ಮಿಡಿಯಾದಲ್ಲಿ ನಿಖಿಲ್ ಬಗ್ಗೆ ಅಪಪ್ರಚಾರ ಮಾಡುತ್ತಿರುವವರು ಮತದಾರರೇ ಅಲ್ಲ ಎಂದ ಸಿಎಂ

ಬುಧವಾರ, 13 ಮಾರ್ಚ್ 2019 (07:06 IST)
ಬೆಂಗಳೂರು : ಮಂಡ್ಯದಲ್ಲಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಹಲವು ವಲಯಗಳಲ್ಲಿ ಬಾರೀ ವಿರೋಧ ವ್ಯಕ್ತವಾಗುತ್ತಿರುವ ಹಿನ್ನಲೆಯಲ್ಲಿ ಗರಂ ಆದ ಸಿಎಂ ಕುಮಾರಸ್ವಾಮಿ ಅವರು, “ಸೋಶಿಯಲ್ ಮಿಡಿಯಾದಲ್ಲಿ ನಿಖಿಲ್ ಬಗ್ಗೆ ಅಪಪ್ರಚಾರ ಮಾಡುತ್ತಿರುವವರು ಮತದಾರರೇ ಅಲ್ಲ, ಮಾಧ್ಯಮದವರ ಟೀಕೆಗೂ ನಾನು ಅಂಜುವುದಿಲ್ಲ” ಎಂದು ಕಿಡಿಕಾರಿದ್ದಾರೆ.


ಪಕ್ಷದ ವರಿಷ್ಠ ದೇವೇಗೌಡರ ನಿವಾಸದಲ್ಲಿ ಭೇಟಿ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಸಾಮಾಜಿಕ ಜಾಲತಾಣ ಅಥವಾ ಮಾಧ್ಯಮ ವರದಿಗಳನ್ನು ನೋಡಿ ಹಳ್ಳಿ ಜನ ವೋಟ್‌ ಹಾಕಲ್ಲ. ತಮಗಾಗಿ ದುಡಿಮೆ ಮಾಡುವ, ಚಾಕರಿ ಮಾಡುವರನ್ನು ಮಂಡ್ಯದ ಜನ ಅಷ್ಟು ಸುಲಭವಾಗಿ ಕೈಬಿಡುವುದಿಲ್ಲ. ಯಾರಾರ‍ಯರ ಕೊಡುಗೆ ಏನೇನಿದೆ ಎಂಬುದನ್ನು ಜನ ತೀರ್ಮಾನ ಮಾಡುತ್ತಾರೆ’ ಎಂದು ಹೇಳಿದ್ದಾರೆ.


‘ನಿಖಿಲ್‌ ಹೊರಗಿನವರು ಎಂದು ಸ್ಥಳೀಯರು ಗುಲ್ಲೆಬ್ಬಿಸುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಡಿ.ವಿ. ಸದಾನಂದಗೌಡರು ಬೆಂಗಳೂರು ಉತ್ತರದಲ್ಲಿ ಎಂಪಿ ಆಗಿಲ್ಲವೇ? ಯಡಿಯೂರಪ್ಪ ಮಂಡ್ಯದಲ್ಲಿ ಹುಟ್ಟಿ ಶಿವಮೊಗ್ಗದಲ್ಲಿ ರಾಜಕಾರಣ ಮಾಡುತ್ತಿಲ್ಲವೇ? ನಾನು ಹಾಸನದಲ್ಲಿ ಹುಟ್ಟಿ ರಾಮನಗರದಿಂದ ಗೆದ್ದಿಲ್ಲವೇ? ಯಾರು ಎಲ್ಲಿ ಬೇಕಾದರೂ ಚುನಾವಣೆಗೆ ನಿಲ್ಲಬಹುದು. ಆದರೆ, ನಿಖಿಲ್‌ ವಿಚಾರದಲ್ಲಿ ವ್ಯವಸ್ಥಿತವಾಗಿ ಏನೆಲ್ಲಾ ನಡೆಯುತ್ತಿದೆ ಎಂಬುದನ್ನು ನಾನು ಅರ್ಥ ಮಾಡಿಕೊಳ್ಳಬಲ್ಲೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ