ಈ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಬೇಡ ಎಂದು ಸಿಎಂ ಹೇಳಿದ್ಯಾಕೆ?
ರಾಜ್ಯದ ಈ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಮಾರಿ ಮಾಡುವುದು ಬೇಡ ಎಂದು ಸಿಎಂ ಹೇಳಿದ್ದಾರೆ.
ವಿವಿಧ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಜಿಲ್ಲೆಯ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದ ಮುಖ್ಯಮಂತ್ರಿ, ಈ ವಾರದ ಪರಿಸ್ಥಿತಿ ನೋಡಿಕೊಂಡು ನಂತರವಷ್ಟೇ ಹಾಸನದಲ್ಲಿ ಸಂಪೂರ್ಣ ಲಾಕ್‍ಡೌನ್ ಬಗ್ಗೆ ನಿರ್ಧರಿಸಬಹುದು ಎಂದಿದ್ದಾರೆ.
ಕೊರೊನಾ ವೈರಸ್ ವಿಚಾರದಲ್ಲಿ ಯಾವುದೇ ಜಿಲ್ಲೆಯ ಅಧಿಕಾರಿ ಮೈಮರೆಯಬಾರದು. ಆಯಾ ಜಿಲ್ಲೆಯ ಸುರಕ್ಷತೆಯ ಸಲುವಾಗಿ ಅಗತ್ಯವಾದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಅಧಿಕಾರವಿದೆ. ಹಾಗಾಗಿ ಇನ್ನೂ ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಸಿಎಂ ಹೇಳಿದ್ದಾರೆ.