ಕಾಂಗ್ರೆಸ್ ನಾಯಕರಿಂದಲೇ ಸಿಎಂ ಹಗರಣ ಬಯಲಿಗೆ: ಕುಮಾರಸ್ವಾಮಿ ಬಾಂಬ್
ಶನಿವಾರ, 2 ಡಿಸೆಂಬರ್ 2017 (17:10 IST)
ಕಾಂಗ್ರೆಸ್ ನಾಯಕರಿಂದಲೇ ಸಿಎಂ ಸಿದ್ದರಾಮಯ್ಯ ಹಗರಣಗಳು ಬಯಲಿಗೆ ಬರಲಿವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಹಾಕಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿಯ ಆಪರೇಶನ್ ಕಮಲಕ್ಕೆ ಸಿಎಂ ಸಿದ್ದರಾಮಯ್ಯ ಪರೋಕ್ಷ ಬೆಂಬಲ ನೀಡಿದ್ದರು. ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಂಡು ಹಿರಿಯ ಕಾಂಗ್ರೆಸ್ ನಾಯಕರನ್ನು ಸೋಲಿಸಿದ್ದಾರೆ ಎಂದು ಆರೋಪಿಸಿದರು.
ಸಿಎಂ ಸಿದ್ದರಾಮಯ್ಯ ಮತ್ತು ಅವರ ಆಪ್ತರ ಹಗರಣಗಳು ಶೀಘ್ರದಲ್ಲಿಯೇ ಬಯಲಿಗೆ ಬರಲಿವೆ. ತುಂಬಾ ದಿನ ಮುಚ್ಚಿಡಲು ಸಾಧ್ಯವಿಲ್ಲ. ಕೆಲವೇ ದಿನಗಳಲ್ಲಿ ರಾಜ್ಯ ರಾಜಕೀಯದಲ್ಲಿ ಹೊಸ ಬದಲಾವಣೆಗಳಾಗಲಿವೆ ಎಂದು ಭವಿಷ್ಯ ನುಡಿದರು.
ಮುಂಬರುವ ಚುನಾವಣೆಯಲ್ಲಿ ಬೆಂಗಳೂರಿನ ವಲಯದಲ್ಲಿ 15 ಕ್ಷೇತ್ರಗಳಲ್ಲಿ ಜೆಡಿಎಸ್ ಟಿಕೆಟ್‌ಗೆ ಭಾರಿ ಪೈಪೋಟಿಯಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.