ಕೊನೆಗೂ 50,000 ರೂ. ವರೆಗಿನ ರೈತರ ಸಾಲಮನ್ನಾ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬುಧವಾರ, 21 ಜೂನ್ 2017 (13:53 IST)
ಕೊನೆಗೂ ಸಿಎಂ ಸಿದ್ದರಾಮಯ್ಯ ಸಂಕಷ್ಟದಲ್ಲಿರುವ ರಾಜ್ಯದ ರೈತರ ನೆರವಿಗೆ ಧಾವಿಸಿದ್ದಾರೆ. ಸಹಕಾರಿ ಬ್ಯಾಂಕ್`ಗಳಲ್ಲಿನ 50,000 ರೂ. ವರೆಗಿನ ರೈತರ ಸಾಲಮನ್ನಾ ಮಾಡುವುದಾಗಿ ಘೋಷಿಸಿದ್ದಾರೆ.
 

ಜೂನ್ 20ರವರೆಗಿನ ಅಂದರೆ ನಿನ್ನೆವರೆಗೆ ರೈತರು ಮಾಡಿರುವ ಸಾಲವನ್ನ ಸರ್ಕಾರ ಮನ್ನಾ ಮಾಡಲಿದೆ. ಇದರಿಂದಾಗಿ 8165 ಕೋಟಿ ರೂ. ಹೊರೆಯಾಗಲಿದ್ದು, 22 ಲಕ್ಷಕ್ಕೂ ಅಧಿಕ ರೈತರಿಗೆ ಅನುಕೂಲವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ನಿರಂತರವಾಗಿ ಸಾಲಮನ್ನಾ ಮಾಡುವಂತೆ ಒತ್ತಾಯಿಸಿದ್ದರು. ವಿಧಾನಸಭೆ ಅಧಿವೇಶನದ ಕೊನೆಯ ದಿನ ಸಿಎಂ ತಮ್ಮ ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ. ಉತ್ತರಪ್ರದೇಶ, ಪಂಜಾಬ್ ಸೇರಿದಂತೆ ಹಲವೆಡೆ ಸಾಲಮನ್ನಾ ಮಾಡಿದ ಬಳಿಕ ಈ ಕುರಿತಂತೆ ಭಾರೀ ಚರ್ಚೆ ಶುರುವಾಗಿತ್ತು. ಈ ಬಗ್ಗೆ ಕಾಂಗ್ರೆಸ್ ಶಾಸಕರು ತೀವ್ರ ಒತ್ತಡ ಹೇರಿದ್ದರು. ಸ್ವತಃ ರಾಹುಲ್ ಗಾಂಧಿ ದೇಶದ ಎಲ್ಲ ರಾಜ್ಯಗಳಲ್ಲಿ ರೈತರ ಸಾಲಮನ್ನಾ ಮಾಡಬೇಕೆಂದು ಒತ್ತಾಯಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

 

ವೆಬ್ದುನಿಯಾವನ್ನು ಓದಿ