ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ, ಭ್ರಷ್ಟ ಸಚಿವರನ್ನು ಸಂಪುಟದಿಂದ ಕೈಬಿಡದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮಗೆ ಬೇಡವಾದವರನ್ನು ಮಾತ್ರ ಸಂಪುಟದಿಂದ ದೂರವಿಟ್ಟಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ರಾಜ್ಯದಲ್ಲಿ ಗುಂಡಾಗಿರಿ ನಡೆಯುತ್ತಿದೆ ಎಂದು ರಾಜ್ಯ ಸರಕಾರದ ವಿರುದ್ಧ ಗುಡಗಿದ್ದಾರೆ.