ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಮ್ಯಾಚ್‌ಫಿಕ್ಸಿಂಗ್: ಮಾಲೀಕಯ್ಯ ಗುತ್ತೇದಾರ್

ಗುರುವಾರ, 23 ಜೂನ್ 2016 (14:37 IST)
ಸಚಿವ ಸಂಪುಟ ಪುನರ್‌ರಚನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಲ್ಲಿಕಾರ್ಜುನ ಖರ್ಗೆ ಮ್ಯಾಚ್‌ಫಿಕ್ಸಿಂಗ್ ಮಾಡಿಕೊಂಡಿದ್ದಾರೆ ಎಂದು ಮಾಲೀಕಯ್ಯ ಗುತ್ತೇದಾರ್ ಗಂಭೀರವಾಗಿ ಆರೋಪಿಸಿದ್ದಾರೆ.
 
ಮಾಜಿ ಸಚಿವ ರೆಬಲ್ ಸ್ಟಾರ್ ಅಂಬರೀಶ್ ಅವರನ್ನು ಭೇಟಿ ಮಾಡಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಲೀಕಯ್ಯ ಗುತ್ತೇದಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಲ್ಲಿಕಾರ್ಜುನ ಖರ್ಗೆ ಮ್ಯಾಚ್‌ಫಿಕ್ಸಿಂಗ್ ಮಾಡಿಕೊಂಡಿದ್ದಾರೆ. ಇವರಿಂದಲೇ ಕಾಂಗ್ರೆಸ್ ಮುಕ್ತ ಕರ್ನಾಟಕವಾಗಲಿದೆ. ಕೇಂದ್ರ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ನಾಟಕವಾಡುವುದನ್ನು ಬೀಡಲಿ ಎಂದು ಗುಡುಗಿದ್ದಾರೆ.
 
ಸಚಿವ ಸಂಪುಟದಿಂದ ನಮ್ಮನ್ನು ದೂರವಿಡಲಾಗಿದೆ. ನಾನು ಒಟ್ಟು 40 ಅತೃಪ್ತ ಶಾಸಕರಿದ್ದೇವೆ. ಇಂದು ಮುಂಜಾನೆ ಮಾಜಿ ಸಚಿವ ರೆಬಲ್ ಸ್ಟಾರ್ ಅಂಬರೀಶ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದೇವೆ. ಸೋಮವಾರದೊಳಗಾಗಿ ಅತೃಪ್ತ ಶಾಸಕರೆಲ್ಲಾ ಸೇರಿ ಸಭೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಮಾಲೀಕಯ್ಯ ಗುತ್ತೇದಾರ್ ರಾಜ್ಯ ಸರಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ