ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ, ಪತ್ನಿ ತಪ್ಪೇ ಮಾಡಿಲ್ಲ, ಮಾಡಿದ್ದೆಲ್ಲಾ ಅಧಿಕಾರಿಗಳು: ಲೋಕಾಯುಕ್ತ ವರದಿ

Krishnaveni K

ಗುರುವಾರ, 23 ಜನವರಿ 2025 (11:34 IST)
ಬೆಂಗಳೂರು: ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಪತ್ನಿ ಪಾರ್ವತಿ ಸಿದ್ದರಾಮಯ್ಯಗೆ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿದೆ. ಈ ಪ್ರಕರಣದಲ್ಲಿ ಅಧಿಕಾರಿಗಳು ತಪ್ಪು ಮಾಡಿದ್ದಾರೆ ಎಂದು ವರದಿ ನೀಡಿದೆ.

ಮುಡಾದಿಂದ ಸಿಎಂ ಸಿದ್ದರಾಮಯ್ಯ ಪತ್ನಿ ಹೆಸರಿನಲ್ಲಿ ಅಕ್ರಮವಾಗಿ ಸೈಟು ನೀಡಲಾಗಿದೆ ಎಂದು ಆರೋಪವಾಗಿತ್ತು. ಈ ಬಗ್ಗೆ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ದೂರು ನೀಡಿದ್ದರು. ಈ ಪ್ರಕರಣವನ್ನು ಲೋಕಾಯುಕ್ತ ತನಿಖೆ ನಡೆಸಿದ್ದು ವರದಿ ಸಿದ್ಧಪಡಿಸಿದೆ.

ಇದೀಗ ವರದಿಯಲ್ಲಿ ಸಿಎಂ ಮತ್ತು ಪತ್ನಿಗೆ ಕ್ಲೀನ್ ಚಿಟ್ ನೀಡಲಾಗಿದೆ ಎಂದು ತಿಳಿದುಬಂದಿದೆ. ಈ ವರದಿಯನ್ನು ಲೋಕಾಯುಕ್ತ ಅಧಿಕಾರಿಗಳು ಕೋರ್ಟ್ ಗೆ ಸಲ್ಲಿಸಲಿದ್ದಾರೆ. ಪ್ರಕರಣದಲ್ಲಿ ಸಿದ್ದರಾಮಯ್ಯು ಮತ್ತು ಪತ್ನಿ ಪ್ರಭಾವ ಬಳಸಿ ಅಕ್ರಮ ಮಾಡಿಲ್ಲ. ಅದಕ್ಕೆ ಯಾವುದೇ ದಾಖಲೆ ಕಂಡುಬಂದಿಲ್ಲ ಎಂದು ಲೋಕಾಯುಕ್ತ ವರದಿ ನೀಡಿದೆ.

ಆದರೆ ಪ್ರಕರಣದಲ್ಲಿ ತಪ್ಪಾಗಿಲ್ಲ ಎಂದಲ್ಲ. ಈ ಪ್ರಕರಣದಲ್ಲಿ ಮುಡಾ ಅಧಿಕಾರಿಗಳು ತಪ್ಪು ಮಾಡಿದ್ದಾರೆ ಎಂದು ಲೋಕಾಯುಕ್ತ ವರದಿ ನೀಡಿದೆ. ಇದರ ಬಗ್ಗೆ ಪ್ರತಿಕ್ರಿಯಿಸಿರುವ ಸ್ನೇಹಮಯಿ ಕೃಷ್ಣ ನನ್ನ ಬಳಿಯಿರುವ ದಾಖಲೆಗಳಿಂದಲೇ ಸಿಎಂಗೆ ಶಿಕ್ಷೆ ಕೊಡಿಸುತ್ತೇನೆ ಎಂದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ