ಬಿಜೆಪಿ ಬೈಕ್ ರ್ಯಾಲಿ ಮೇಲೆ ಸಿಎಂ ಸಿದ್ದರಾಮಯ್ಯ ಕೆಂಗೆಣ್ಣು

ಶನಿವಾರ, 2 ಸೆಪ್ಟಂಬರ್ 2017 (17:27 IST)
ಬಿಜೆಪಿಯ ಬೈಕ್ ರ್ಯಾಲಿ ಮಂಗಳೂರು ತಲುಪಬಾರದು ಎಂದು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ರಾಮಲಿಂಗಾರೆಡ್ಡಿಗೆ ಕಟ್ಟಪ್ಪಣೆ ಹೊರಡಿಸಿದ್ದಾರೆ.
ದಕ್ಷಿಣ ಕರಾವಳಿಯಲ್ಲಿ ಶಾಂತಿ ಸ್ಥಾಪನೆಯಾಗಿದೆ. ಬಿಜೆಪಿಯ ಯುವ ಮೋರ್ಚಾದ ಬೈಕ್ ರ್ಯಾಲಿಯಿಂದ ಶಾಂತಿ ಕದಡುವ ಸಾಧ್ಯತೆಗಳಿವೆ. ಮತ್ತೆ ಕೋಮುಗಲಭೆ ಎದುರಾಗುವ ಸಾಧ್ಯತೆಗಳಿವೆ ಎನ್ನುವ ವರದಿಗಳ ಹಿನ್ನೆಲೆಯಲ್ಲಿ ಬೈಕ್ ರ್ಯಾಲಿ ರದ್ದುಗೊಳಿಸಲು ಸರಕಾರ ಚಿಂತನೆ ನಡೆಸಿದೆ.
 
ಬಿಜೆಪಿ ಮುಖಂಡರು ಮಂಗಳೂರು ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಬಿಜೆಪಿ ರ್ಯಾಲಿಗಳು ಮಂಗಳೂರು ತಲುಪಿದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಿಸುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಮಂಗಳೂರು ಚಲೋ ಕಾರ್ಯಕ್ರಮವನ್ನು ರದ್ದುಗೊಳಿಸುವ ಬಗ್ಗೆ ಸರಕಾರ ಆದೇಶ ಹೊರಡಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.
 
ನೂತನ ಗೃಹ ಸಚಿವರಾಗಿ ಅಧಿಕಾರ ಸ್ವೀಕರಿಸಿದ ರಾಮಲಿಂಗಾರೆಡ್ಡಿಯವರಿಗೆ, ಆರಂಭದಲ್ಲಿಯೇ ಹೊಸತೊಂದು ಕ್ಲಿಷ್ಟವಾದ ಸವಾಲ್ ದೊರೆತಂತಾಗಿದೆ ಎಂದು ಮೂಲಗಳು ತಿಳಿಸಿವೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ