ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಇಂದು ಸ್ಪೋಟ ನಡೆದ ಸ್ಥಳಕ್ಕೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಲ್ಸನ್ ಗಾರ್ಡನ್‌ನ ಚಿನ್ನಯ್ಯನ ಪಾಳ್ಯದಲ್ಲಿ ಸಿಲಿಂಡರ್ ಸ್ಪೋಟಗೊಂಡು ಅವಘಡ ಸಂಭವಿಸಿದೆ ಎಂಬುದು ಪೊಲೀಸರು ಹಾಗೂ ಬಿಬಿಎಂಪಿಯವರ ಪ್ರಾಥಮಿಕ ವರದಿ.
ಈ ದುರ್ಘಟನೆಯಲ್ಲಿ ಒಂದು ಸಾವಾಗಿದೆ, 9 ಜನರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ಅತ್ಯಂತ ದುರದೃಷ್ಟಕರ ಘಟನೆ. ಮೃತ ಬಾಲಕನಿಗೆ ರೂ.5 ಲಕ್ಷ ಪರಿಹಾರ ನೀಡಲಾಗುವುದು ಹಾಗೂ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಘಟನೆಯಲ್ಲಿ ಹಾನಿಗೊಳಗಾದ ಮನೆಗಳನ್ನು ರಿಪೇರಿ ಮಾಡಿಕೊಡುವಂತೆ ಸೂಚನೆ ನೀಡಿದ್ದೇನೆ ಎಂದು ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.