ದಸರಾ ಉದ್ಘಾಟನೆ ಯಾರಿಂದ ಎಂದು ಘೋಷಿಸಿದ ಸಿಎಂ ಸಿದ್ದರಾಮಯ್ಯ

Sampriya

ಶುಕ್ರವಾರ, 22 ಆಗಸ್ಟ್ 2025 (15:42 IST)
ಬೆಂಗಳೂರು: ಬೂಕರ್ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್‌ ಅವರು ಈ ಬಾರಿ ದಸರಾವನ್ನು ಉದ್ಟಾಟನೆ ಮಾಡಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಲಿದ್ದಾರೆ. 

ವಿಧಾನಸೌಧದಲ್ಲಿ ಮಾತನಾಡಿದ ಸಿಎಂ, ಬಾನು ಮುಪ್ತಾಕ್ ಒಬ್ಬರಿಗಷ್ಟೇ ಬೂಕರ್ ಪ್ರಶಸ್ತಿ ಲಭಿಸಿದ್ದು, ಕನ್ನಡ ಚಳವಳಿಯಲ್ಲಿ ಕೆಲಸ ಮಾಡಿರುವ ಪ್ರಗತಿ ಪರ ಚಿಂತಕರು ಆಗಿದ್ದಾರೆ. ಹಾಗಾಗಿ ಈ ಬಾರಿ ದಸರಾ ಉದ್ಘಾಟನೆಯನ್ನು ಅವರ ಕೈಯಿಂದ್ದ ಮಾಡಲಿದ್ದು, ಆಹ್ವಾನವನ್ನು ನೀಡಲಾಗಿದೆ ಎಂದರು.  

ಈ ಬಾರಿ 11 ದಿನ ದಸರಾ ನಡೆಯಲಿದೆ. ಸೆಪ್ಟೆಂಬರ್‌ 22ರಿಂದ ದಸರಾ ಆರಂಭ ಆಗಲಿದ್ದು, ಅಕ್ಟೋಬರ್ 2 ರಂದು ವಿಜಯದಶಮಿ ಇದೆ. ಬಾನು ಮುಷ್ತಾಕ್ ಅವರಿಗೆ ಗೌರವದಿಂದ ಜಿಲ್ಲಾಡಳಿತ ಅಧಿಕೃತವಾಗಿ ಆಹ್ವಾನಿಸಲಿದೆ ಎಂದು ಸ್ಪಷ್ಟಪಡಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ