ಯಲ್ಲಾಪುರ ಲಾರಿ ಅಪಘಾತ ಸಂತ್ರಸ್ತರ ಕುಟುಂಬಕ್ಕೆ ಪರಿಹಾರ ಮೊತ್ತ ಘೋಷಿಸಿದ ಸಿಎಂ ಸಿದ್ದರಾಮಯ್ಯ

Krishnaveni K

ಬುಧವಾರ, 22 ಜನವರಿ 2025 (12:18 IST)
ಕಾರವಾರ: ಯಲ್ಲಾಪುರದಲ್ಲಿ ಲಾರಿ ಪಲ್ಟಿಯಾಗಿ ಮೃತಪಟ್ಟ ಕುಟುಂಬಸ್ಥರಿಗೆ ಸಿಎಂ ಸಿದ್ದರಾಮಯ್ಯ ಪರಿಹಾರ ಘೋಷಿಸಿದ್ದು ಗಾಯಾಳುಗಳಿಗೂ ನೆರವು ನೀಡಿದ್ದಾರೆ.

ಇಂದು ಮುಂಜಾನೆ ಯಲ್ಲಾಪುರದಲ್ಲಿ ತರಕಾರಿ ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿಯಾಗಿ 9 ಮಂದಿ ಸಾವನ್ನಪ್ಪಿದ್ದರೆ 15 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ತರಕಾರಿ ಲಾರಿಯಲ್ಲಿ ಇವರೆಲ್ಲರೂ ಕುಮಟಾ ಕಡೆಗೆ ತೆರಳುತ್ತಿದ್ದರು ಎನ್ನಲಾಗಿದೆ. ತೀರಾ ಮಂಜು ಮುಸುಕಿದ್ದರಿಂದ ರಸ್ತೆ ಸರಿಯಾಗಿ ಕಾಣಿಸದೇ ಲಾರಿ ಪಲ್ಟಿಯಾಗಿದೆ.

ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸಂತಾಪ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ ತಲಾ 3 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅಲ್ಲದೆ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೂ ಉಚಿತ ಚಿಕಿತ್ಸೆಯ ನೆರವು ನೀಡುವುದಾಗಿ ಘೋಷಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ‘ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ ರೂ.3 ಲಕ್ಷ ಪರಿಹಾರ ನೀಡಲಾಗುವುದು.
ಜೊತೆಗೆ ಅಪಘಾತದಲ್ಲಿ ಗಾಯಗೊಂಡವರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು. ಅವಸರ, ಅತಿ ವೇಗದ ಚಾಲನೆ ಹಾಗೂ ಅಜಾಗರೂಕತೆ ಅಪಘಾತಕ್ಕೆ ಕಾರಣ. ಎಚ್ಚರಿಕೆಯಿಂದ ವಾಹನ ಚಲಾಯಿಸಿ, ಸುರಕ್ಷಿತರಾಗಿರಿ ಎಂದು ಮನವಿ ಮಾಡುತ್ತೇನೆ’ ಎಂದು ಭರವಸೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ