ಕರ್ನಾಟಕದಲ್ಲಿ ಜಾತಿಗಣತಿಗೆ ಡೇಟ್ ಫಿಕ್ಸ್

Krishnaveni K

ಬುಧವಾರ, 23 ಜುಲೈ 2025 (14:59 IST)
ಬೆಂಗಳೂರು: ರಾಜ್ಯದಲ್ಲಿ ಪ್ರತ್ಯೇಕವಾಗಿ ಸರ್ಕಾರ ಜಾತಿಗಣತಿ ಮಾಡುವುದಾಗಿ ಘೋಷಿಸಿತ್ತು. ಅದರಂತೆ ಈಗ ಜಾತಿಗಣತಿ ಡೇಟ್ ಘೋಷಣೆಯಾಗಿದೆ.

ಸೆ.22 ರಿಂದ ಅಕ್ಟೋಬರ್ 7 ರವರೆಗೆ ರಾಜ್ಯದಲ್ಲಿ ಜಾತಿಗಣತಿ ಸಮೀಕ್ಷೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಜಾತಿಗಣತಿ ಬಗ್ಗೆ ಇಂದು ಅವರು ಸಭೆ ನಡೆಸಿದ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಒಟ್ಟು 15 ದಿನಗಳಲ್ಲಿ ಸಮೀಕ್ಷೆ ನಡೆಸಬೇಕು. ಅಕ್ಟೋಬರ್ ಕೊನೆಯ ವಾರದೊಳಗಾಗಿ ಸಮೀಕ್ಷೆ ವರದಿ  ಸಲ್ಲಿಸಬೇಕು. ಸಮೀಕ್ಷೆಗೆ ಬೇಕಾದ ಸಿದ್ಧತೆಗಳನ್ನು ಈಗಿನಿಂದಲೇ ಆರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಅವರು ಹೇಳಿದ್ದಾರೆ.

ಸಮರ್ಪಕವಾಗಿ ಸಮೀಕ್ಷೆ ನಡೆಸಬೇಕು. ಸಮೀಕ್ಷೆ ಕುರಿತು ಯಾವುದೇ ಅಪಸ್ವರ ಕೇಳಿಬರಬಾರದು. ಸಮೀಕ್ಷೆಯಿಂದ ಯಾರೂ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಹಿಂದೆ 10 ವರ್ಷಗಳ ಹಿಂದೆ ಮಾಡಲಾಗಿದ್ದ ಸಮೀಕ್ಷೆಗಳು ಇಂದಿಗೆ ಸೂಕ್ತವಲ್ಲದ ಕಾರಣ ಹೈಕಮಾಂಡ್ ಸೂಚನೆ ಹಿನ್ನಲೆಯಲ್ಲಿ ಸರ್ಕಾರ ಮತ್ತೊಮ್ಮೆ ಜಾತಿಗಣತಿ ಮಾಡಲು ಮುಂದಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ