ರಾತ್ರೋ ರಾತ್ರಿ ಮುಡಾ ತನಿಖಾಧಿರಿಯನ್ನು ಭೇಟಿಯಾಗಿದ್ದೇಕೆ ಸಿದ್ದರಾಮಯ್ಯ ಭಾಮೈದ

Krishnaveni K

ಬುಧವಾರ, 20 ನವೆಂಬರ್ 2024 (10:43 IST)
ಮೈಸೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಎಸ್ ಪಿ ಉದೇಶ್ ರನ್ನು ರಾತ್ರೋ ರಾತ್ರಿ ಸಿದ್ದರಾಮಯ್ಯ ಬಾಮೈದ ಭೇಟಿಯಾಗಿರುವುದು ವಿವಾದಕ್ಕೆ ಕಾರಣವಾಗಿದೆ.

ಸಿದ್ದರಾಮಯ್ಯ ಪತ್ನಿಗೆ ಅಕ್ರಮವಾಗಿ ಸೈಟು ನೀಡಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಪಿ ಉದೇಶ್ ತನಿಖೆ ನಡೆಸುತ್ತಿದ್ದಾರೆ. ಈಗಾಗಲೇ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದನನ್ನು ವಿಚಾರಣೆ ನಡೆಸಲಾಗಿದೆ. ನಿನ್ನೆ ಮುಡಾ ಮಾಜಿ ಆಯುಕ್ತ ಡಿಬಿ ನಟೇಶ್ ರನ್ನು ವಿಚಾರಣೆಗೊಳಪಡಿಸಲಾಗಿತ್ತು.

ನಟೇಶ್ ವಿಚಾರಣೆ ನಡೆದ ಅರ್ಧಗಂಟೆಯಲ್ಲಿ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ ಕಚೇರಿಗೆ ಬಂದಿದ್ದಾರೆ. ರಾತ್ರೋ ರಾತ್ರಿ ವಿಚಾರಣೆಗೆ ಕರೆಯದೇ ಇದ್ದರೂ ಇದ್ದಕ್ಕಿದ್ದಂತೆ ಬಂದು ಎಸ್ ಪಿ ಉದೇಶ್ ರನ್ನು ಭೇಟಿ ಮಾಡಿದ್ದಾರೆ. ಅಷ್ಟೇ ಅಲ್ಲ ಸುಮಾರು ಅರ್ಧಗಂಟೆ ಕಾಲ ಉದೇಶ್ ಜೊತೆಗೆ ಮಾತುಕತೆಯನ್ನೂ ನಡೆಸಿದ್ದಾರೆ.

ಈಗಾಗಲೇ ಲೋಕಾಯುಕ್ತ ತನಿಖೆ ಬಗ್ಗೆ ವಿಪಕ್ಷ ಬಿಜೆಪಿ ಸಂಶಯ ವ್ಯಕ್ತಪಡಿಸಿದೆ. ರಾಜ್ಯ ಸರ್ಕಾರದ ಅಧೀನದಲ್ಲೇ ಇರುವ ಸಂಸ್ಥೆಯಿಂದ ಸಿಎಂ ವಿರುದ್ಧದ ಪ್ರಕರಣದ ತನಿಖೆ ನಡೆಸಿದರೆ ಯಾವುದೇ ಪ್ರಯೋಜನವಾಗದು ಎಂದು ಆಕ್ರೋಶ ವ್ಯಕ್ತಪಡಿಸುತ್ತಲೇ ಇದೆ. ಇದರ ನಡುವೆ ಸಿದ್ದರಾಮಯ್ಯ ಬಾಮೈದ ಎಸ್ ಪಿ ಉದೇಶ್ ರನ್ನು ಭೇಟಿ ಮಾಡಿರುವುದು ಅನುಮಾನಕ್ಕೆ ಕಾರಣವಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ