ಮುಡಾ ಹಗರಣ ಬಿಸಿ: ಇಂದಿನ ಕಾರ್ಯಕ್ರಮಗಳನ್ನೆಲ್ಲಾ ರದ್ದು ಮಾಡಿ ಕೂತ ಸಿಎಂ ಸಿದ್ದರಾಮಯ್ಯ

Krishnaveni K

ಸೋಮವಾರ, 30 ಸೆಪ್ಟಂಬರ್ 2024 (13:07 IST)
ಬೆಂಗಳೂರು: ಮುಡಾ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಇಂದಿನಿಂದ ವಿಚಾರಣೆಯ ಬಿಸಿ ಶುರುವಾಗಲಿದೆ. ಈ ನಡುವೆ ಸಿಎಂ ಇಂದಿನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಿದ್ದಾರೆ.

ಇಂದು ಸಿಎಂ ಸಿದ್ದರಾಮಯ್ಯ ಅಕ್ಷಯಪಾತ್ರೆ ಅನ್ನ ಯೋಜನೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕಿತ್ತು. ಆದರೆ ಕೊನೆಯ ಕ್ಷಣದಲ್ಲಿ ಕಾರ್ಯಕ್ರಮ ರದ್ದುಗೊಳಿಸಿ ತಮ್ಮ ವಿರುದ್ಧ ದಾಖಲಾಗಿರುವ ಮುಡಾ ಹಗರಣ ತನಿಖೆ ಎದುರಿಸುವ ಬಗ್ಗೆ ಅಧಿಕಾರಿಗಳು, ಸಂಪುಟ ಸಹೋದ್ಯೋಗಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ.

ಇಂದು ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಗೃಹಸಚಿವ ಪರಮೇಶ್ವರ್ ಜೊತೆ ಸಿಎಂ ಒಬ್ಬರಾದ ಮೇಲೆ ಒಬ್ಬರಂತೆ ಸುದೀರ್ಘ ಮೀಟಿಂಗ್ ನಡೆಸಿದ್ದಾರೆ. ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ್ದಾರೆ. ಈ ಮೂಲಕ ಸಚಿವ ಸಂಪುಟ ಸಹೋದ್ಯೋಗಿಗಳು ಸಿಎಂ ಸಿದ್ದರಾಮಯ್ಯ ಬೆಂಬಲಕ್ಕೆ ನಿಂತಿದ್ದಾರೆ.

ಇನ್ನು, ಸಿಎಂ ಸಿದ್ದರಾಮಯ್ಯ ವಿರುದ್ಧ ಇಂದಿನಿಂದ ತನಿಖಾ ತಂಡ ವಿಚಾರಣೆ ಆರಂಭಿಸಲಿದ್ದಾರೆ. ಹೀಗಾಗಿ ಮುಂದಿನ ಕಾನೂನು ನಡೆಗಳ ಬಗ್ಗೆ ಇಂದು ಡಿಕೆಶಿ ಮತ್ತು ಪರಮೇಶ್ವರ್ ಜೊತೆ ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸಿದ್ದಾರೆ. ಸಿಎಂ ವಿರುದ್ಧ ಎಫ್ಐಆರ್ ದಾಖಲಾದ ಬೆನ್ನಲ್ಲೇ ತೆರೆಮರೆಯಲ್ಲಿ ಕಾಂಗ್ರೆಸ್ ನಲ್ಲಿ ಸಾಕಷ್ಟು ಚಟುವಟಿಕೆಗಳು ನಡೆಯುತ್ತಿವೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ