ಮೈಸೂರು : ನಮ್ಮಲ್ಲಿ ಒಳಜಗಳ ಇಲ್ಲ.ಹಾಗಿದ್ದಿದ್ದರೆ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು
ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಜಗಳವಾಗಿ ಸರ್ಕಾರ ಪತನವಾಗಲಿದೆ ಎಂದು ಪಬಿಜೆಪಿ ನಾಯಕರು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ರಾಜಕೀಯವಾಗಿ ಹೇಳಿಕೆ ನೀಡುತ್ತಿದ್ದಾರೆ ಎಂದರು.
ಉತ್ತಮ ವಾತಾವರಣ
ಪರಿಷತ್ ಚುನಾವಣೆಯ ವಾತಾವರಣ ಉತ್ತಮವಾಗಿದ್ದು, ಈ ಬಾರಿ ಕಾಂಗ್ರೆಸ್ ಪಕ್ಷ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ. ಅದಕ್ಕಾಗಿ ಅಭ್ಯರ್ಥಿಗಳನ್ನು ಆರು ತಿಂಗಳು ಮುಂಚಿತವಾಗಿಯೇ ಆಯ್ಕೆ ಮಾಡಲಾಗಿತ್ತು. ಅಭ್ಯರ್ಥಿಗಳಿಗೆ ಸಮಯ ಸಿಕ್ಕು, ಮತದಾರರನ್ನು ಭೇಟಿಯಾಗಲು ಅವಕಾಶ ದೊರೆಯಿತು ಎಂದರು.
ಪರಿಣಾಮ ಬೀರುವುದಿಲ್ಲ
ಮೈತ್ರಿ ಪರಿಣಾಮ ಚುನಾವಣೆಯ ಮೇಲೆ ಆಗಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಲೋಕಸಭೆ ಚುನಾವಣೆಯಲ್ಲಿಯೂ ಕೆಡಿಎಎ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು.
ಸಾಧನೆಗಳ ತುಲನೆ ಮಾಡುವ ಶಕ್ತಿ ಮತದಾರರಿಗಿದೆ
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಚುನಾವಣೆಯ ಮೇಲೆ ಪರಿಣಾಮ ಬೀರಲಿದೆಯೇ ಎಂಬ ಪ್ರಶ್ನೆಗೆ ಉತ್ತರ ನೀಡಿ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರು ರಾಜಕೀಯವಾಗಿ ಪ್ರಬುದ್ಧರಾಗಿರುವವರು
ಯಾವುದು ಸರಿ, ತಪ್ಪು ಎನ್ನುವ ಬಗ್ಗೆ ಅರಿವು ಹೊಂದಿದವರು. ಕೇಂದ್ರ ಸರ್ಕಾರದ ಸಾಧನೆಗಳು ಹಾಗೂ ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ತುಲನೆ ಮಾಡುವ ಶಕ್ತಿ ಅವರಿಗಿದೆ ಎಂದರು.
ಬೇರೆ ರಾಜ್ಯಗಳ ಚುನಾವಣೆಯ ಪ್ರಚಾರಕ್ಕೆ ತೆರಳುವ ಬಗ್ಗೆ ಮಾತನಾಡಿ ಪ್ರಚಾರಕ್ಕೆ ಆಹ್ವಾನ ಬಂದಿದೆ ಎಂದರು.
ಹಿಟ್ ಅಂಡ್ ರನ್ ಕೇಸ್
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ .ಅವರು ಭ್ರಷ್ಟಾಚಾರದ ಬಗ್ಗೆ ತಮ್ಮ ಬಳಿ ಪೆನ್ ಡ್ರೈವ್ ಇದ್ದು, ತನಿಖೆ ಮಾಡಿಸುವ ತಾಕತ್ತು ಸರ್ಕಾರಕ್ಕಿದೆ ಎಂದರೆ ಬಿಡುಗಡೆ ಮಾಡುವುದಾಗಿ ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ ಕುಮಾರಸ್ವಾಮಿಯವರದ್ದು ಸದಾ ಹಿಟ್ ಅಂಡ್ ರನ್ ಕೇಸ್ ಎಂದು ಹೇಳಿದರು.
ಅವರ ಸರ್ಕಾರವನ್ನು ಮೊದಲು ಉಳಿಸಿಕೊಳ್ಳಲಿ
ಮಹಾರಾಷ್ಟ್ರ ಸಿಎಂ ಕರ್ನಾಟಕ ಸರ್ಕಾರ ಪತನವಾಗುವ ಬಗ್ಗೆ ಮಾತನಾಡಿ ನಮ್ಮ ಸರ್ಕಾರದ ಬಗ್ಗೆ ಮಾತನಾಡುವ ಬದಲು ಅವರ ಸರ್ಕಾರವನ್ನು ಮೊದಲು ಉಳಿಸಿಕೊಳ್ಳಲಿ ಎಂದರು.