ಎಂ.ಕೆ.ಗಣಪತಿ ಪ್ರಕರಣದ ಬಗ್ಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

ಶನಿವಾರ, 26 ಆಗಸ್ಟ್ 2017 (15:18 IST)
ದಿವಂಗತ ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯುವಾಗ ಸಿಬಿಐಗೆ ವಹಿಸಲು ಆಗುತ್ತಾ? ಎಂದು ಪ್ರಶ್ನಿಸಿದ ಅವರು, ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಗಣಪತಿ ಆತ್ಮಹತ್ಯೆ ಪ್ರಕರಣದ ಬಗ್ಗೆ ಸಿಐಡಿ ವರದಿ ಕೊಟ್ಟಿದೆ. ಸುಪ್ರೀಂಕೋರ್ಟ್‌ನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ಸಿಬಿಐಗೆ ವಹಿಸಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದ್ದಾರೆ.
 
ಎಂ.ಕೆ.ಗಣಪತಿ ಆತ್ಮಹತ್ಯೆಗೆ ಸಂಬಂಧಿಸಿದಂತೆ ವಿರೋಧ ಪಕ್ಷಗಳು ಮಾಡುತ್ತಿರುವ ಆರೋಪಗಳಲ್ಲಿ ಸತ್ಯಾಂಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
 
ಶೀಘ್ರದಲ್ಲಿ ಸಚಿವ ಸಂಪುಟ ವಿಸ್ತರಣೆ
 
ಶೀಘ್ರದಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು. ಸಂಪುಟ ವಿಸ್ತರಣೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. ಮೂರು ಸ್ಥಾನಗಳನ್ನು ಭರ್ತಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ