ಉದಾಹರಣೆಗೆ ಮಹಾರಾಷ್ಟ್ರದಲ್ಲಿ ಸೋಯಾಅವರೆ ಬೆಳೆಗೆ ಪ್ರತಿ ಕ್ವಿಂಟಾಲ್‌ಗೆ ಎಲ್-1 ದರವು ರೂ.8500/- ನಿಗದಿಯಾಗಿದ್ದು ಕರ್ನಾಟಕದಲ್ಲಿ ಇದು ರೂ.7270/- ನಿಗದಿಯಾಗಿದೆ. ಅದೇ ರೀತಿ, ತೊಗರಿ ಬೆಳೆಗೆ ಮಹಾರಾಷ್ಟ್ರದಲ್ಲಿ ಪ್ರತಿ ಕ್ವಿಂಟಾಲ್‌ಗೆ ರೂ.25,000/- ಇದ್ದು ಕರ್ನಾಟಕದಲ್ಲಿ ಪ್ರತಿ ಕ್ವಿಂಟಾಲ್‌ಗೆ ರೂ.17,900/- ನಿಗದಿಪಡಿಸಲಾಗಿದೆ. ಹೆಸರು ಮತ್ತು ಜೋಳದ ಬೆಳೆಗೆ ಪ್ರತಿ ಕ್ವಿಂಟಾಲ್‌ಗೆ ಮಹಾರಾಷ್ಟ್ರದಲ್ಲಿ ಕ್ರಮವಾಗಿ ರೂ.23,500/- ರೂ. 14,000/- ಇದ್ದು ಕರ್ನಾಟಕದಲ್ಲಿ ಕ್ರಮವಾಗಿ ರೂ.18,600/- ರೂ.12,500/- ನಿಗದಿಪಡಿಸಲಾಗಿದೆ. ಈ ಹೋಲಿಕೆಯಲ್ಲಿ ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ವಿವಿಧ ಬೆಳೆಗಳ ಬಿತ್ತನೆ ಬೀಜಗಳ ದರಗಳು ಗಣನೀಯವಾಗಿ ಕಡಿಮೆ ಇರುವುದು ಕಂಡುಬರುತ್ತದೆ.