ಜಿ.ಪರಮೇಶ್ವರ್ ವಿರುದ್ಧ ಸಿಎಂ ಸಿದ್ದರಾಮಯ್ಯ ದೂರು

ಭಾನುವಾರ, 3 ಸೆಪ್ಟಂಬರ್ 2017 (15:50 IST)
ಸಚಿವರ ಪ್ರತಿಜ್ಞಾವಿಧಿ ಸಮಾರಂಭಕ್ಕೆ ಗೈರುಹಾಜರಾಗಿರುವ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ವಿರುದ್ಧ ಸಿಎಂ ಸಿದ್ದರಾಮಯ್ಯ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರಿಗೆ ದೂರು ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಗೈರು ಹಾಜರಾಗಿದ್ದರಿಂದ ನಮ್ಮಿಬ್ಬರ ನಡುವೆ ವೈಮನಸ್ಸಿದೆ, ಭಿನ್ನಾಭಿಪ್ರಾಯಗಳಿವೆ ಎಂದು ಎರಡು ದಿನಗಳಿಂದ ಮಾಧ್ಯಮಗಳು ವರದಿ ಮಾಡುತ್ತಿವೆ. ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. ಆದಾಗ್ಯೂ ಪರಮೇಶ್ವರ್ ಸ್ಪಷ್ಟೀಕರಣ ನೀಡಲಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.
 
ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರುವ ವರದಿಯನ್ನು ನೋಡಿ ಪರಮೇಶ್ವರ್ ಕೂಡಲೇ ಪತ್ರಿಕಾಗೋಷ್ಠಿ ಕರೆದು ತಮ್ಮ ಹೇಳಿಕೆ ನೀಡಬೇಕಾಗಿತ್ತು. ಇಂತಹ ಕಾರಣಗಳಿಂದ ಕಾಂಗ್ರೆಸ್ ಪಕ್ಷಕ್ಕೆ ತೊಂದರೆಯಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
ಮುಂದಿನ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿರುವಾಗ ಇಂತಹ ನಡುವಳಿಕೆಗಳು ಪಕ್ಷಕ್ಕೆ ಧಕ್ಕೆ ತರುತ್ತವೆ ಎಂದು ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ವಿರುದ್ಧ ವೇಣುಗೋಪಾಲ್‌ಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ