2019ರಲ್ಲಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿ: ಜಿ.ಟಿ.ದೇವೇಗೌಡ

ಭಾನುವಾರ, 5 ನವೆಂಬರ್ 2017 (13:12 IST)
2019ರಲ್ಲಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿಯಾಗುವ ಸಾಧ್ಯತೆಗಳಿವೆ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯಗೆ ಪ್ರಧಾನಿಯಾಗುವ ಬಯಕೆಯಿರುವುದರಿಂದಲೇ ಪ್ರಧಾನಿ ಮೋದಿಗೆ ನನ್ನ ಕಂಡ್ರೆ ಭಯ ಎಂದು ಹೇಳಿದ್ದಾಗಿ ತಿಳಿಸಿದ್ದಾರೆ.
 
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗೆ ಪ್ರಧಾನಿಯಾಗುವ ಅರ್ಹತೆಯಿಲ್ಲವಾದ್ದರಿಂದ, ಪ್ರಧಾನಿ ಅಭ್ಯರ್ಥಿ ಸ್ಥಾನಕ್ಕೆ ಸಿಎಂ ಸಿದ್ದರಾಮಯ್ಯ ಕಣ್ಣಿಟ್ಟಿದ್ದಾರೆ. ಅವರ ಕಣ್ಣು ಏನಿದ್ದರೂ ದೆಹಲಿ ಮೇಲಿದೆ ಎಂದು ಹೇಳಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪ್ರಧಾನಿಯಾಗುವ ಆಸೆಯಿರುವುದರಿಂದ ಕಸರತ್ತು ನಡೆಸುತ್ತಿದ್ದಾರೆ ಎಂದು ಜೆಡಿಎಸ್ ಮುಖಂಡ ಜಿ.ಟಿ.ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ