ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿ ಮಂಜುನಾಥೇಶ್ವರನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಸನ್ನಿಧಿಯಲ್ಲಿ ಪ್ರಸಾದ ಸ್ವೀಕರಿಸಿದರು.
ಈ ವೇಳೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾದರು. ಸಾಂಪ್ರದಾಯಿಕ ಉಡುಗೆ ಧರಿಸಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಅವರು ಬಳಿಕ ಸನ್ನಿಧಿಯಲ್ಲಿ ತೀರ್ಥ ಪ್ರಸಾದ ಸ್ವೀಕರಿಸಿದರು.
ಸಚಿವರಾದ ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೆ.ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಸಚಿವ ರಮಾನಾಥ ರೈ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ ಭಂಡಾರಿ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.