ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್‌ರನ್ನು ಸೋಲಿಸಿದ್ದೇ ಸಿಎಂ ಸಿದ್ದರಾಮಯ್ಯ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್‌ರನ್ನು ಸೋಲಿಸಿಲ್ಲ ಎಂದು ಚಾಮಂಡೇಶ್ವರಿ ದೇವಿಯ ಮೇಲೆ ಆಣೆ ಮಾಡಲಿ ಎಂದು ಸವಾಲ್ ಹಾಕಿದ್ದಾರೆ.
ಒಂದು ವೇಳೆ, ವಿಧಾನಸಭೆ ಚುನಾವಣೆಯಲ್ಲಿ ಜಿ.ಪರಮೇಶ್ವರ್ ಜಯಗಳಿಸಿದಲ್ಲಿ ಸಿಎಂ ಸ್ಥಾನಕ್ಕೆ ಪೈಪೋಟಿ ನೀಡುತ್ತಾರೆ ಎನ್ನುವ ಕಾರಣದಿಂದ ಪರಮೇಶ್ವರ್ ಅವರನ್ನು ಸೋಲಿಸಲು ಸಿಎಂ ಸಿದ್ದರಾಮಯ್ಯ ರಣತಂತ್ರ ರೂಪಿಸಿದ್ದರು ಎಂದು ಆರೋಪಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅಧಿಕಾರದ ಮದದಲ್ಲಿ ತಾವೇ ಮುಂದಿನ ಮುಖ್ಯಮಂತ್ರಿ ಎಂದು ಘೋಷಿಸಿಕೊಳ್ಳುತ್ತಿದ್ದಾರೆ. ಆದರೆ, ಮುಂಬರುವ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಗುಡುಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.