ಸಭೆಯಲ್ಲಿ ನಮ್ಮ ರಾಜ್ಯದಿಂದ ಆಯ್ಕೆಯಾಗಿರುವ ಕೇಂದ್ರದ ಸಚಿವರುಗಳು ಲೋಕಸಭೆ ಮತ್ತು ರಾಜ್ಯಸಭಾ ಸದಸ್ಯರು, ನನ್ನ ಸಚಿವ ಸಂಪುಟದ ಸಹೋದ್ಯೋಗಿಗಳು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ನಾವು ಬೇರೆ ಬೇರೆ ರಾಜಕೀಯ ಪಕ್ಷಗಳನ್ನು ಪ್ರತಿನಿಧಿಸುತ್ತಿರಬಹುದು. ಆದರೆ ಕರ್ನಾಟಕದ ಹಿತಾಸಕ್ತಿಯ ವಿಷಯ ಬಂದಾಗ ನಾವೆಲ್ಲರೂ ಒಂದೇ ವೇದಿಕೆಯವರು. ಈ ವಿಷಯದಲ್ಲಿ ನಮ್ಮ ಹಿಂದಿನವರೂ ಸಹ ಮಾದರಿಗಳಾಗಿದ್ದಾರೆ. ನೆಲ, ಜಲ, ಸಂಪನ್ಮೂಲ, ಭಾಷೆ, ಸಂಸ್ಕೃತಿ, ಐಡೆಂಟಿಟಿ ಇತ್ಯಾದಿ ವಿಚಾರಗಳಿಗೆ ಬಂದಾಗ ನಮಗೆ ಪಕ್ಷಗಳಿಲ್ಲ. ಕರ್ನಾಟಕ ಹಿತಾಸಕ್ತಿಯ ರಕ್ಷಣೆ ನಮ್ಮ ಆಧ್ಯತೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.