ಬೆಂಗಳೂರು: ಕಳೆದ ಕೆಲವು ದಿನಗಳಿಂದ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಬಣದ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ ಎಂಬ ವರದಿಗಳ ಬೆನ್ನಲ್ಲೇ ಇಂದು ಜಿಲ್ಲಾಧಿಕಾರಿಗಳ ಸಭೆಯಲ್ಲಿ ಸಿಎಂ ಮತ್ತು ಡಿಸಿಎಂ ಪರಸ್ಪರ ಆತ್ಮೀಯರಾಗಿ ಕಂಡುಬಂದರು.
ರಾಜ್ಯದಲ್ಲಿ ಡೆಂಗ್ಯೂ, ಜೀಕಾ ವೈರಸ್, ಮಲೇರಿಯಾ ಸೇರಿದಂತೆ ಜ್ವರ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಇಂದು ಸಿಎಂ ಮತ್ತು ಡಿಸಿಎಂ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಸಲಾಯಿತು.
ಈ ವೇಳೆ ಇಬ್ಬರೂ ನಾಯಕರು ಪರಸ್ಪರ ಆತ್ಮೀಯವಾಗಿ ಕಾಲ ಕಳೆದಿದ್ದಾರೆ. ಸಿಎಂ ಕುರ್ಚಿಗಾಗಿ ಇಬ್ಬರ ನಡುವೆ ಫೈಟ್ ನಡೆಯುತ್ತಿದೆ ಎಂಬ ವರದಿಗಳ ಬೆನ್ನಲ್ಲೇ ಇಬ್ಬರೂ ಈ ರೀತಿ ಕಾಣಿಸಿಕೊಂಡಿದ್ದು ವಿಶೇಷವಾಗಿತ್ತು. ಈ ಮೂಲಕ ತಾವಿಬ್ಬರೂ ಒಂದಾಗಿದ್ದೇವೆ ಎಂದು ಸಂದೇಶ ಸಾರಿದಂತಾಗಿದೆ.
ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಸಂಪುಟದ ಎಲ್ಲ ಸದಸ್ಯರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯೆಲ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಪಾಲ್ಗೊಂಡಿದ್ದರು.